Friday, July 23, 2021
Homeಬೆಂಗಳೂರು'ಕುಮಾರಸ್ವಾಮಿ - ಇಂದ್ರಜಿತ್ ಲಂಕೇಶ್ ಭೇಟಿ' : ಸ್ಪಷ್ಟನೆ ಕೊಟ್ಟ ಹೆಚ್‌ಡಿಕೆ

ಇದೀಗ ಬಂದ ಸುದ್ದಿ

‘ಕುಮಾರಸ್ವಾಮಿ – ಇಂದ್ರಜಿತ್ ಲಂಕೇಶ್ ಭೇಟಿ’ : ಸ್ಪಷ್ಟನೆ ಕೊಟ್ಟ ಹೆಚ್‌ಡಿಕೆ

ಬೆಂಗಳೂರು : ನಟ ದರ್ಶನ್ ಮೈಸೂರಿನ ಸಂದೇಶ್ ಹೋಟೆಲ್ ನಲ್ಲಿ ಸಿಬ್ಬಂದಿಯೊಬ್ಬರ ಮೇಲೆ ಹಲ್ಲೆ ಮಾಡಿದ್ದಾರೆ ಎಂಬುದಾಗಿ ನಿರ್ದೇಶಕ ಇಂದ್ರಜಿತ್ ಲಂಕೇಶ್ ಸ್ಪೋಟಕ ಬಾಂಬ್ ಸಿಡಿಸಿದ್ದರು. ಇದರ ಬೆನ್ನಲ್ಲೇ ಈಗ ಪೊಲೀಸರು ತನಿಖೆ ಕೂಡ ಆರಂಭಿಸಿದ್ದಾರೆ. ಈ ಸಂದರ್ಭದಲ್ಲಿಯೇ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರನ್ನು ನಿರ್ದೇಶಕ ಇಂದ್ರಜಿತ್ ಲಂಕೇಶ್ ಭೇಟಿಯಾಗಿರುವಂತ ಪೋಟೋ ಒಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.

ಈ ಕುರಿತಂತೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿರುವಂತ ಜೆಡಿಎಸ್ ವರಿಷ್ಠ ಹೆಚ್ ಡಿ ಕುಮಾರಸ್ವಾಮಿ, ಯಾಕೆ ಈ ಫೋಟೋ ವೈರಲ್ ಮಾಡುತ್ತಿದ್ದಾರೆ ಗೊತ್ತಿಲ್ಲ. ಪತ್ರಿ ನೂರಾರು ಜನ ನನ್ನ ಭೇಟಿ ಮಾಡುತ್ತಾರೆ. ನನ್ನ ಜೊತೆ ಫೋಟೋ ತೆಗೆದುಕೊಳ್ಳುತ್ತಾರೆ. ಇತ್ತೀಚಿಗೆ ನನ್ನ ಇಂದ್ರಜಿತ್ ಭೇಟಿ ಮಾಡಿಲ್ಲ.ಯಾಕೆ ನನ್ನ ಹೆಸರು ತಳುಕು ಹಾಕಿಕೊಂಡಿದ್ದಿರಾ.? ನಾನು ರಾಜಕಾರಣ ಮಾಡಿದ್ರೆ ನೇರವಾಗಿ ಮಾಡುತ್ತೆನೆ ಎಂಬುದಾಗಿ ಕಿಡಿಕಾರಿದ್ದಾರೆ.

ಇನ್ನೂ ಮುಂದುವರೆದು ಮಾತನಾಡಿದಂತ ಅವರು, ನಿನ್ನೆಯಿಂದ ನೆಡೆಯುತ್ತಿರುವ ಘಟನೆಯ ಬಗ್ಗೆ ಆ ಫೋಟೊ ಇಟ್ಟುಕೊಂಡು ನನ್ನ ಹೆಸರು ತಳುಕು ಹಾಕುವ ಕೆಲಸ ಮಾಡಬೇಡಿ. ಇತ್ತೀಚೆಗೆ ಭೇಟಿ ಮಾಡಿಲ್ಲ. ಈ ಹಿಂದೆ ಹಲವಾರು ಬಾರಿ ಭೇಟಿ ಮಾಡಿ ಸಂದರ್ಶನ ಮಾಡಿದ್ದಾರೆ. ಸಿನಿಮಾ ಬಗ್ಗೆ ಮತನಾಡಿದ್ದಾರೆ. ಆದ್ರೇ ಈಗ ಈ ಫೋಟೋ ಯಾರು ಯಾವ ಕಾರಣಕ್ಕೆ ಬಳಸಿಕೊಂಡು ಉಪಯೋಗ ಮಾಡಿಕೊಳ್ಳಲು ಹೊರಟಿದ್ದಾರೆ ಗೊತ್ತಿಲ್ಲ. ಸತ್ಯ ಅವರೇ ತಿಳಿಸುವುದು ಒಳ್ಳೆಯದು ಎಂದಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img