Friday, July 30, 2021
Homeಸುದ್ದಿ ಜಾಲಕೇಂದ್ರದಲ್ಲಿ ಬಾಕಿ ಇರುವ ಜಿಲ್ಲೆಯ ಯೋಜನೆಗಳು ಶೀಘ್ರ ಪೂರ್ಣ: ಶೋಭಾ

ಇದೀಗ ಬಂದ ಸುದ್ದಿ

ಕೇಂದ್ರದಲ್ಲಿ ಬಾಕಿ ಇರುವ ಜಿಲ್ಲೆಯ ಯೋಜನೆಗಳು ಶೀಘ್ರ ಪೂರ್ಣ: ಶೋಭಾ

ಉಡುಪಿ: ಕೇಂದ್ರ ಸರಕಾರದ ಮಟ್ಟದಲ್ಲಿ ಮಂಜೂರಾತಿಗೆ ಬಾಕಿ ಇರುವ ಜಿಲ್ಲೆಯ ವಿವಿಧ ಯೋಜನೆ ಮತ್ತು ಕಾಮಗಾರಿಗಳ ಪಟ್ಟಿಯನ್ನು ಕೂಡಲೇ ಸಲ್ಲಿಸಿ. ಈ ಬಗ್ಗೆ ಕೇಂದ್ರದ ಸಂಬಂಧಪಟ್ಟ ಸಚಿವರೊಂದಿಗೆ ಚರ್ಚಿಸಿ, ಈ ಬಗ್ಗೆ ಶೀಘ್ರದಲ್ಲಿ ಮಂಜೂರುಗೊಳಿಸಲು ಪ್ರಯತ್ನಿಸಲಾಗುವುದು ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಅವರು ಶುಕ್ರವಾರ ವೀಡಿಯೋ ಸಭೆಯ ಮೂಲಕ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಮಾನ್ಸೂನ್‌ ಹಾನಿಯ ಕುರಿತು ಪರಿಶೀಲನಾ ಸಭೆ ನಡೆಸಿ ಮಾತನಾಡಿದರು.

ಜಿಲ್ಲೆಯಲ್ಲಿ ಸಾಗರಮಾಲಾ ಯೋಜನೆಯಡಿ ಬಾಕಿ ಇರುವ ಕಾಮಗಾರಿಗಳ ಬಗ್ಗೆ ವಿವರವಾದ ಮಾಹಿತಿ ನೀಡಿ. ಉಪ್ಪುಂದದಲ್ಲಿ 130 ಕೋಟಿ ರೂ. ವೆಚ್ಚದಲ್ಲಿ ಬಂದರು ನಿರ್ಮಾಣ ಕುರಿತಂತೆ ಕೇಂದ್ರ ಸಚಿವರೊಂದಿಗೆ ಚರ್ಚಿಸಲಾಗಿದೆ. ಕೇಂದ್ರದಲ್ಲಿ ಹೊಸ ಮೀನುಗಾರಿಕಾ ಮಸೂದೆ ಸಿದ್ಧವಾಗುತ್ತಿದ್ದು, ಈ ಬಗ್ಗೆ ಸಲಹೆ ಮತ್ತು ಅಭಿಪ್ರಾಯಗಳನ್ನು ಕ್ರೋಡೀಕರಿಸಿ ಸಲ್ಲಿಸಿ ಎಂದು ಶೋಭಾ ಕರಂದ್ಲಾಜೆ ಹೇಳಿದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img