Friday, July 30, 2021
Homeಬೆಂಗಳೂರುರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ..?

ಇದೀಗ ಬಂದ ಸುದ್ದಿ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ..?

ಬೆಂಗಳೂರು, ಜುಲೈ 16: ನೈಋತ್ಯ ಮುಂಗಾರು ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಸಕ್ರಿಯವಾಗಿದ್ದು, ಉತ್ತರ ಒಳನಾಡಿನಲ್ಲಿ ಸಹಜ ಸ್ಥಿತಿಯಲ್ಲಿದೆ. ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ ಬಹುತೇಕ ಕಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಹೆಚ್ಚು ಮಳೆಯಾಗಲಿದೆ. ಉಳಿದಂತೆ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಸಾಧಾರಣ ಮಳೆಯಾಗಲಿದೆ.

ಚಿತ್ರದುರ್ಗ, ದಾವಣಗೆರೆ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಾಧ್ಯತೆ ಇದ್ದು, ಜುಲೈ 18ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಜುಲೈ 16 ಮತ್ತು 17ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬುಧವಾರ ಉತ್ತರ ಕನ್ನಡದ ಕದ್ರಾದಲ್ಲಿ 13 ಸೆಂ.ಮೀ ಮಳೆ, ಸುಬ್ರಮಣ್ಯ 10 ಸೆಂ.ಮೀ. ಸುಳ್ಯ, ದ.ಕ. ತಲಾ 9 ಸೆ.ಮೀ. ಮಳೆ ದಾಖಲು ಆಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img