Sunday, August 1, 2021
Homeಬೆಂಗಳೂರುಏಳೆಂಟು ಸಚಿವರು ಶೀಘ್ರದಲ್ಲೇ ದೆಹಲಿಗೆ ತೆರಳಲಿದ್ದೇವೆ: ಬಿ.ಸಿ.ಪಾಟೀಲ್

ಇದೀಗ ಬಂದ ಸುದ್ದಿ

ಏಳೆಂಟು ಸಚಿವರು ಶೀಘ್ರದಲ್ಲೇ ದೆಹಲಿಗೆ ತೆರಳಲಿದ್ದೇವೆ: ಬಿ.ಸಿ.ಪಾಟೀಲ್

ಬೆಂಗಳೂರು: ಈಗಾಗಲೇ ಸಚಿವ ಎಸ್.ಟಿ.ಸೋಮಶೇಖರ್ ಪ್ರಧಾನಿ ಮೋದಿ ಭೇಟಿಗೆ ಕಾಲಾವಕಾಶವನ್ನು ಕೋರಿದ್ದಾರೆ. ಸಮಯ ಕೊಟ್ಟ ಕೂಡಲೇ ನಾವು ಏಳೆಂಟು ಸಚಿವರು ಒಟ್ಟಿಗೆ ದೆಹಲಿಗೆ ಭೇಟಿ ನೀಡಲಿದ್ದೇವೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್​​ ತಿಳಿಸಿದರು.

ವಿಕಾಸಸೌಧದಲ್ಲಿ ಮಾತನಾಡಿದ ಅವರು, ರಾಜ್ಯದ ನೂತನ ಕೇಂದ್ರ ಸಚಿವರನ್ನೂ ಸಹ ಭೇಟಿಯಾಗಿ ಚರ್ಚೆ ನಡೆಸಲಿದ್ದೇವೆ. ಇದಕ್ಕೆ ಬೇರೆ ಯಾವುದೇ ಅರ್ಥ ಕಲ್ಪಿಸುವುದು ಬೇಡ ಎಂದು ಸ್ಪಷ್ಟಪಡಿಸಿದರು.

17 ಮಂದಿ ಬಿಜೆಪಿ ಶಾಸಕರು ಕಾಂಗ್ರೆಸ್​ಗೆ ವಾಪಸ್ ಬರಬಹುದು ಎಂಬ ಡಿಕೆಶಿ ಹೇಳಿಕೆಗೆ ಟಾಂಗ್ ನೀಡಿದ ಅವರು, ಡಿಕೆಶಿ ಕನಸು ಕಾಣುತ್ತಿದ್ದಾರೆ. ಅವರ ಕನಸು ಈಡೇರಲ್ಲ. ಈಗ ಕಾಂಗ್ರೆಸ್​ನವರ ಅರ್ಜಿ ಸೇಲ್ ಆಗುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

ಅವರ ತಟ್ಟೆಯಲ್ಲೇ ಕತ್ತೆ ಸತ್ತು ಬಿದ್ದಿದೆ, ಅದನ್ನು ನೋಡೋದು ಬಿಟ್ಟು ನಮ್ಮ ತಟ್ಟೆಯಲ್ಲಿ ಬಿದ್ದಿರುವ ನೊಣ ನೋಡೋದಕ್ಕೆ ಮುಂದಾಗಿದ್ದಾರೆ. ಮೊದಲು ಸಿದ್ದರಾಮಯ್ಯ ಮತ್ತು ಡಿಕೆಶಿ ಅವರ ಕಿತ್ತಾಟ ಸರಿ ಮಾಡಿಕೊಳ್ಳಲಿ.‌ ನಾವು ಯಾರೂ ಕಾಂಗ್ರೆಸ್‌ಗೆ ಹೋಗುವುದಿಲ್ಲ ಎಂದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img