Sunday, August 1, 2021
Homeಜಿಲ್ಲೆಮೈಸೂರುಆಷಾಢ ಶುಕ್ರವಾರದಂದು ನಾಡದೇವತೆ ಚಾಮುಂಡೇಶ್ವರಿ ಸರಳ ಪೂಜೆ

ಇದೀಗ ಬಂದ ಸುದ್ದಿ

ಆಷಾಢ ಶುಕ್ರವಾರದಂದು ನಾಡದೇವತೆ ಚಾಮುಂಡೇಶ್ವರಿ ಸರಳ ಪೂಜೆ

ಮೈಸೂರು: ಕೊರೊನಾ ಭೀತಿ ಹಿನ್ನೆಲೆ ಆಷಾಢ ಶುಕ್ರವಾರದಂದು ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಸಾಂಪ್ರದಾಯಿಕ ಹಾಗೂ ಸರಳವಾಗಿ ಪೂಜೆ ಸಲ್ಲಿಸಲಾಯಿತು. ಶ್ರೀ ಚಾಮುಂಡೇಶ್ವರಿ ಅಮ್ಮನವರಿಗೆ ರುದ್ರಾಭಿಷೇಕ, ಕುಂಕುಮಾಭಿಷೇಕ ಮಾಡಿ ವಿಶೇಷ ಅಲಂಕಾರದೊಂದಿಗೆ ಪೂಜೆ ಪುನಸ್ಕಾರ ನೆರವೇರಿಸಲಾಯಿತು.

ಪ್ರತಿ ವರ್ಷವೂ ಆಷಾಢ ಶುಕ್ರವಾರಗಳಂದು ಸಹಸ್ರಾರು ಜನ ಸೇರುತ್ತಿದ್ದರು. ಕೊರೊನಾ ಹರಡುವಿಕೆ ತಡೆಗಟ್ಟಲು ಸಾರ್ವಜನಿಕರ ಪ್ರವೇಶ ನಿರ್ಬಂಧ ವಿಧಿಸಲಾಗಿದೆ. ಶುಕ್ರವಾರ, ಶನಿವಾರ, ಭಾನುವಾರ ಪ್ರವೇಶ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಈ ಹಿನ್ನೆಲೆ ಚಾಮುಂಡಿಬೆಟ್ಟ ಸಂಪರ್ಕಿಸುವ ಎಲ್ಲ ದಾರಿಗಳನ್ನೂ ಕ್ಲೋಸ್ ಮಾಡಲಾಗಿದೆ. ಸಚಿವರು, ಗಣ್ಯರಿಗೆ ಮಾತ್ರ ಅವಕಾಶ ನೀಡಲಾಗಿದ್ದು, ಸಾರ್ವಜನಿಕರಿಗೆ ನಿರ್ಬಂಧ ವಿಧಿಸಲಾಗಿದೆ. ಇಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಸೇರಿ ಗಣ್ಯರು ಚಾಮುಂಡಿ ಬೆಟ್ಟಕ್ಕೆ ತೆರಳಲಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img