Friday, July 30, 2021
Homeಸುದ್ದಿ ಜಾಲದೇಶದಲ್ಲಿ 38 ಸಾವಿರ ಹೊಸ ಕೋವಿಡ್ ಕೇಸ್

ಇದೀಗ ಬಂದ ಸುದ್ದಿ

ದೇಶದಲ್ಲಿ 38 ಸಾವಿರ ಹೊಸ ಕೋವಿಡ್ ಕೇಸ್

ನವದೆಹಲಿ: ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಹೊಸದಾಗಿ 38,079 ಕೇಸ್​ಗಳು ಪತ್ತೆಯಾಗಿವೆ. ನಿನ್ನೆ ಒಂದೇ ದಿನ 560 ಮಂದಿ ಸೋಂಕಿಗೆ ಬಲಿಯಾಗಿದ್ದು, ಈ ಮೂಲಕ ಮೃತಪಟ್ಟವರ ಸಂಖ್ಯೆ 4,13,091 ಕ್ಕೆ ಏರಿದೆ.

ಕೋವಿಡ್​ ಸೋಂಕಿತರ ಸಂಖ್ಯೆ 3,10,64,908ಕ್ಕೆ ಹೆಚ್ಚಳವಾಗಿದ್ದು, ಸದ್ಯ 4,24,025 ಸಕ್ರಿಯ ಪ್ರಕರಣಗಳಿವೆ. ಚೇತರಿಗೆ ಪ್ರಮಾಣ ಶೇಕಡಾ 97.31% ರಷ್ಟಿದೆ.

ಕಳೆದ 24 ಗಂಟೆಯಲ್ಲಿ 19,98,715 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ಈವರೆಗೆ 44,20,21,954 ಜನರಿಗೆ ತಪಾಸಣೆ ಮಾಡಲಾಗಿದೆ. ಈವರೆಗೆ 39.96 ಕೋಟಿ ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ICMR)​ ತಿಳಿಸಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img