Saturday, July 31, 2021
Homeಸುದ್ದಿ ಜಾಲವಿಜಯ್ ಮಲ್ಯ, ನೀರವ್ ಮೋದಿ, ಮೆಹುಲ್ ಚೋಕ್ಸಿಗೆ ಬಿಗ್ ಶಾಕ್

ಇದೀಗ ಬಂದ ಸುದ್ದಿ

ವಿಜಯ್ ಮಲ್ಯ, ನೀರವ್ ಮೋದಿ, ಮೆಹುಲ್ ಚೋಕ್ಸಿಗೆ ಬಿಗ್ ಶಾಕ್

ನವದೆಹಲಿ : ಬ್ಯಾಂಕುಗಳಿಗೆ ವಂಚನೆ ಮಾಡಿ ವಿದೇಶಗಳಿಗೆ ಪರಾರಿಯಾಗಿರುವ ವಿಜಯ್ ಮಲ್ಯ, ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿಗೆ ಜಾರಿ ನಿರ್ದೇಶನಾಲಯ ಬಿಗ್ ಶಾಕ್ ನೀಡಿದ್ದು, ಮತ್ತೆ 792.11 ಕೋಟಿ ರೂ. ವಸೂಲಿ ಮಾಡಲಾಗಿದೆ.

ವಿಜಯ್ ಮಲ್ಯ, ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿ ಷೇರುಗಳ ಮಾರಾಟದಿಂದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇತೃತ್ವದ ಒಕ್ಕೂಟವು 792.11 ಕೋಟಿ ರೂ. ವಸೂಲಿ ಮಾಡಲಾಗಿದೆ ಎಂದು ಇಡಿ ಅಧಿಕೃತವಾಗಿ ಮಾಹಿತಿ ನೀಡಿದೆ.

ವಿಜಯ್ ಮಲ್ಯ 9 ಸಾವಿರ ಕೋಟಿ ರೂ. ಗಳನ್ನು ಬ್ಯಾಂಕುಗಳಿಗೆ ಪಾವತಿ ಮಾಡಬೇಕಿತ್ತು. ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ವಂಚನೆ ಪ್ರಕರಣದ ಆರೋಪಿಗಳಾದ ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿ 13 ಸಾವಿರ ಕೋಟಿ ರೂ. ಪಾವತಿಸಬೇಕಾಗಿತ್ತು. ಈಗಾಗಲೇ ಎಸ್ ಬಿಐ ಒಕ್ಕೂಟವು ಈಗಾಗಲೇ 7,181 ಕೋಟಿ ರೂ. ವಸೂಲಿ ಮಾಡಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img