Sunday, August 1, 2021
Homeಜಿಲ್ಲೆಬೆಂಗಳೂರುಜಿಲ್ಲಾ ಪ್ರವಾಸಕ್ಕೆ ತೆರಳಿದ ಡಿ ಕೆ ಶಿವಕುಮಾರ್

ಇದೀಗ ಬಂದ ಸುದ್ದಿ

ಜಿಲ್ಲಾ ಪ್ರವಾಸಕ್ಕೆ ತೆರಳಿದ ಡಿ ಕೆ ಶಿವಕುಮಾರ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಎರಡು ದಿನ ರಾಜ್ಯ ಪ್ರವಾಸ ನಿಮಿತ್ತ ಇಂದು ಬೆಂಗಳೂರಿನಿಂದ ಪ್ರಯಾಣ ಬೆಳೆಸಿದ್ದಾರೆ. ಕಾಂಗ್ರೆಸ್ ಪಕ್ಷದ ಸಂಘಟನೆ ಹಾಗೂ ಹಿಂದುಳಿದ ವರ್ಗಗಳ ಕುಂದುಕೊರತೆ ಆಲಿಸುವ ಜೊತೆಗೆ ಅತ್ಯಂತ ಪ್ರಮುಖವಾಗಿ ಸಿಂದಗಿ ವಿಧಾನಸಭೆ ಉಪಚುನಾವಣೆ ಸಂಬಂಧ ಪಕ್ಷದ ಮುಖಂಡರ ಜತೆ ಚರ್ಚಿಸಿ ಗೆಲುವಿನ ಕಾರ್ಯತಂತ್ರ ಹೆಣೆಯುವ ಉದ್ದೇಶದಿಂದಾಗಿ ಅವರು ತೆರಳಿದ್ದಾರೆ.

ಬೆಂಗಳೂರಿನ ಸದಾಶಿವನಗರ ನಿವಾಸದಿಂದ ಇಂದು ಬೆಳಗ್ಗೆ ಹೊರಟಿರುವ ಅವರು ಇಂದು ಮತ್ತು ನಾಳೆ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

ಬೆಳಗ್ಗೆ ಬೆಂಗಳೂರಿನಿಂದ ಕಲಬುರಗಿ ವಿಮಾನದ ಮೂಲಕ ತೆರಳಿರುವ ಡಿಕೆಶಿ, ಕಲಬುರಗಿಯಿಂದ ವಿಜಯಪುರ ಜಿಲ್ಲೆಯ ಸಿಂದಗಿ ವಿಧಾನಸಭಾ ಕ್ಷೇತ್ರಕ್ಕೆ ತೆರಳಿ ಅಲ್ಲಿ ಬೆಳಗ್ಗೆ 11 ಗಂಟೆಗೆ ಹಮ್ಮಿಕೊಂಡಿರುವ ದಲಿತ ಸಮುದಾಯದ ಕುಂದುಕೊರತೆಗಳ ಸಂವಾದ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img