Sunday, August 1, 2021
Homeದೆಹಲಿಮೇಕೆದಾಟು ಯೋಜನೆ:ಕರ್ನಾಟಕದ ಜನತೆಗೆ ಭರವಸೆ ನೀಡಿದ ಬಿಎಸ್​ವೈ

ಇದೀಗ ಬಂದ ಸುದ್ದಿ

ಮೇಕೆದಾಟು ಯೋಜನೆ:ಕರ್ನಾಟಕದ ಜನತೆಗೆ ಭರವಸೆ ನೀಡಿದ ಬಿಎಸ್​ವೈ

ನವದೆಹಲಿ: ದೆಹಲಿ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್​ ಶಾ ಅವರನ್ನ ಭೇಟಿ ಮಾಡಿ ಚರ್ಚೆ ನಡೆಸಿದರು. ಇದಕ್ಕೂ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮೇಕೆದಾಟು ಯೋಜನೆಯಿಂದ ತಮಿಳುನಾಡಿನ ಮೇಲೆ ಯಾವುದೇ ರೀತಿಯ ಪರಿಣಾಮ ಬೀರಲ್ಲ. ಈ ಯೋಜನೆ ಖಂಡಿತವಾಗಿ ಅಸ್ವಿತ್ವಕ್ಕೆ ಬರಲಿದೆ ಎಂದಿದ್ದಾರೆ.

ಮೇಕೆದಾಟು ಯೋಜನೆ ವಿಚಾರವಾಗಿ ಎಲ್ಲರೊಂದಿಗೆ ಚರ್ಚಿಸುತ್ತೇನೆ ಹಾಗೂ ಪೂರ್ಣಗೊಳಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದು ಬಿಎಸ್​ವೈ ಹೇಳಿದ್ದಾರೆ. ಈಗಾಗಲೇ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್​ ಅವರಿಗೆ ಮನವಿ ಮಾಡಿದ್ದೇನೆ ಎಂದಿರುವ ಸಿಎಂ, ಮೇಕೆದಾಟು ಯೋಜನೆ ಪ್ರಾರಂಭಿಸುವುದರಿಂದ ತಮಿಳುನಾಡಿನ ಮೇಲೆ ಯಾವುದೇ ಪರಿಣಾಮ ಬೀರಲ್ಲ ಎಂದು ಅವರಿಗೆ ಬರೆದಿರುವ ಪತ್ರದಲ್ಲಿ ಮನವರಿಕೆ ಮಾಡಿದ್ದೇನೆ ಎಂದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img