Friday, July 30, 2021
Homeಸಕಲೇಶಪುರ'ದರ್ಶನ್ ಪ್ರಕರಣದ ಬಗ್ಗೆ ನಾನು ಈಗ ಮಾತನಾಡಲ್ಲ: ಸುಮಲತಾ

ಇದೀಗ ಬಂದ ಸುದ್ದಿ

‘ದರ್ಶನ್ ಪ್ರಕರಣದ ಬಗ್ಗೆ ನಾನು ಈಗ ಮಾತನಾಡಲ್ಲ: ಸುಮಲತಾ

ಬೆಂಗಳೂರು : ‘ದರ್ಶನ್ ಪ್ರಕರಣದ ಬಗ್ಗೆ ನಾನು ಈಗ ಮಾತನಾಡಲ್ಲ. ನಾನು ಈಗ ಏನೆ ಹೇಳಿದ್ರು ಬೇರೆ ದಾರಿಯಲ್ಲಿ ಹೋಗುತ್ತೆ’ ಎಂದು ಸಂಸದೆ ಹಾಗೂ ಚಿತ್ರನಟಿ ಸುಮಲತಾ ಅಂಬರೀಶ್ ಹೇಳಿದ್ದಾರೆ.

ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿಯಾಗಿದ್ದ ವೇಳೆ ಮಾಧ್ಯಮಗಳ ಜೊತೆ ಅವರು ಮಾತನಾಡಿದರು.

ದರ್ಶನ್ ಮತ್ತು ನಿರ್ಮಾಪಕ ಉಮಾಪತಿ ವೈಮನಸ್ಸಿಗೆ ಆಸ್ತಿ ಖರೀದಿ ವಿಚಾರ ಕಾರಣ ಎನ್ನುವ ಮಾತು ಕೇಳಿಬರುತ್ತಿದೆ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮತ್ತು ರಾಘವೇಂದ್ರ ರಾಜ್ ಕುಮಾರ್ ಅವರ ಆಸ್ತಿಯನ್ನು ನಿರ್ಮಾಪಕ ಉಮಾಪತಿ ಖರೀದಿ ಮಾಡಿದ್ದರು. ಈ ಆಸ್ತಿಯನ್ನು ದರ್ಶನ್ ಕೇಳಿದ್ದರು. ಆದರೆ ಉಮಾಪತಿ ಈ ಆಸ್ತಿ ಕೊಡಲು ನಿರಾಕರಿಸಿದ್ದರು. ಇದೇ ವಿಚಾರ ಇಬ್ಬರ ನಡುವಿನ ವೈಮನಸ್ಸಿಗೆ ಕಾರಣವಾಗಿತ್ತು ಎನ್ನುವ ಮಾತು ಚರ್ಚೆಯಾಗುತ್ತಿದೆ

ಆಸ್ತಿ ಖರೀದಿ ವಿಚಾರದ ಬಗ್ಗೆ ಮಾಧ್ಯಮದವರು ಪ್ರಶ್ನೆ ಮಾಡಿದಾಗ, ಸುಮಲತಾ ಈ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದಿದ್ದಾರೆ. ಇನ್ನು ಹಲ್ಲೆ ಪ್ರಕರಣದ ಬಗ್ಗೆ ಮಾತನಾಡಿ, “ಪೊಲೀಸ್ ತನಿಖೆ ನಡೆಯುತ್ತಿದೆ. ಸತ್ಯಾಂಶ ಹೊರ ಬರಲಿ ಬಳಿಕ ಮಾತನಾಡುತ್ತೇನೆ” ಎಂದಿದ್ದಾರೆ.

25 ಕೋಟಿ ರೂ. ಸಾಲಕ್ಕೆ ಶ್ಯೂರಿಟಿ ಪ್ರಕರಣ ಬೆಳಕಿಗೆ ಬಂದ ನಂತರ ನಟ ದರ್ಶನ್ ಹಾಗೂ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ನಡುವೆ ವೈಮನ್ಸು ಮೂಡಿತು. ಈ ಪ್ರಕರಣ ಮುಗಿಯುತ್ತಿದ್ದಂತೆ ಹೋಟೆಲ್ ಸಿಬ್ಬಂದಿ ಮೇಲೆ ದರ್ಶನ್ ಹಲ್ಲೆ ನಡೆಸಿದ್ದಾರೆ ಎನ್ನುವ ಆರೋಪ ಕೂಡ ಕೇಳಿ ಬಂದಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img