Friday, July 23, 2021
Homeಸುದ್ದಿ ಜಾಲಮಧ್ಯಪ್ರದೇಶ ಬಾವಿ ದುರಂತ : ಮೃತಪಟ್ಟವರ ಕುಟುಂಬಗಳಿಗೆ 2 ಲಕ್ಷ ರೂ. ಪರಿಹಾರ

ಇದೀಗ ಬಂದ ಸುದ್ದಿ

ಮಧ್ಯಪ್ರದೇಶ ಬಾವಿ ದುರಂತ : ಮೃತಪಟ್ಟವರ ಕುಟುಂಬಗಳಿಗೆ 2 ಲಕ್ಷ ರೂ. ಪರಿಹಾರ

ಭೋಪಾಲ್ : ಮಧ್ಯಪ್ರದೇಶದ ಭೋಪಾಲ್ ನ ವಿದಿಶಾದಲ್ಲಿ ನಡೆದ ಬಾವಿ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ವಿದಿಶಾ ಜಿಲ್ಲೆಯ ಗಂಜ್ ಬಸೌಡ ಪ್ರದೇಶದಲ್ಲಿ 6 ವರ್ಷದ ಬಾಲಕಿ ಜುಲೈ 15 ರಂದು ಬಾವಿಗೆ ಬಿದ್ದಿದ್ದಳು. ಅವಳನ್ನು ರಕ್ಷಿಸಲು ಹೋದ 40 ಕ್ಕೂ ಹೆಚ್ಚು ಜನರು ಬಾವಿ ಕುಸಿದ ಪರಿಣಾಮ ಬಾವಿಪಾಲಾಗಿದ್ದರು. ಅದರಲ್ಲಿ ಈಗ 8 ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಹಲವರ ಮೃತದೇಹಗಳ ಪತ್ತೆಗಾಗಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

ದುರಂತದ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿಮಂತ್ರಿ ಕಚೇರಿ, ಮೃತರ ಕುಟುಂಬಗಳಿಗೆ ಸಾಂತ್ವನಗಳು. ಪ್ರಧಾನಿಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಡಿಯಲ್ಲಿ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ನೀಡಲಾಗುವುದು ಎಂದು ಹೇಳಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img