Friday, July 30, 2021
Homeಸುದ್ದಿ ಜಾಲಸೋಮವಾರ ದೆಹಲಿಗೆ ತೆರಳಲಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ

ಇದೀಗ ಬಂದ ಸುದ್ದಿ

ಸೋಮವಾರ ದೆಹಲಿಗೆ ತೆರಳಲಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ವಿಧಾನಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ದೆಹಲಿಗೆ ಬರುವಂತೆ ಕಾಂಗ್ರೆಸ್ ಹೈಕಮಾಂಡ್ ನಿಂದ ಬುಲಾವ್ ಬಂದಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಮುಂದಿನ ಸೋಮವಾರ ಸಂಜೆ (ಜು.19) ದೆಹಲಿ ವಿಮಾನ ಏರಲಿದ್ದಾರೆ.

ಮಂಗಳವಾರ ಸಿದ್ದರಾಮಯ್ಯ ಪಕ್ಷದ ವರಿಷ್ಠರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ‘ಮುಂದಿನ ಸಿಎಂ’ ಹೇಳಿಕೆಗಳ ನಡುವೆ ಸಿದ್ದರಾಮಯ್ಯರಿಗೆ ಹೈಕಮಾಂಡ್ ಆಹ್ವಾನ ಇದೀಗ ಕೈ ಪಾಳಯದಲ್ಲಿ ಚರ್ಚೆಗೆ ಕಾರಣವಾಗಿದೆ.

ರಾಜ್ಯ ಪದಾಧಿಕಾರಿಗಳ ನೇಮಕದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಇತ್ತೀಚೆಗೆ ದೆಹಲಿಗೆ ಭೇಟಿ ನೀಡಿ ಹೈಕಮಾಂಡ್ ಜೊತೆ ಚರ್ಚೆ ನಡೆಸಿದ್ದರು. ಅವರು ತಮ್ಮ ಒಂದು ಪಟ್ಟಿಯನ್ನು ವರಿಷ್ಠರಿಗೆ ನೀಡಿ ಬಂದಿದ್ದರು. ಬಳಿಕ ಸಿದ್ದರಾಮಯ್ಯ ಕೂಡಾ ಒಂದು ಪಟ್ಟಿಯನ್ನು ದೆಹಲಿಗೆ ಕಳುಹಿಸಿದ್ದರು ಎನ್ನಲಾಗಿದೆ. ಇದೀಗ ಇದೇ ವಿಚಾರದ ಬಗ್ಗೆ ಚರ್ಚೆ ಮಾಡಲು ಹೈಕಮಾಂಡ್ ಸಿದ್ದರಾಮಯ್ಯನವರಿಗೆ ಕರೆ ಮಾಡಿದೆ ಎನ್ನಲಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img