Friday, July 23, 2021
HomeಬೆಂಗಳೂರುKSRTCಯಿಂದ 'ಬೆಂಗಳೂರು-ಜೋಗ ಜಲಪಾತ' ಟೂರ್ ಪ್ಯಾಕೇಜ್ ಘೋಷಣೆ

ಇದೀಗ ಬಂದ ಸುದ್ದಿ

KSRTCಯಿಂದ ‘ಬೆಂಗಳೂರು-ಜೋಗ ಜಲಪಾತ’ ಟೂರ್ ಪ್ಯಾಕೇಜ್ ಘೋಷಣೆ

ಬೆಂಗಳೂರು : ಕೊರೋನಾ ಸೋಂಕಿನ ಪಾಸಿಟಿವಿಟಿ ರಾಜ್ಯದಲ್ಲಿ ಕಡಿಮೆಗೊಂಡ ಕಾರಣ, ಅನ್ ಲಾಕ್ 3.0 ಮಾರ್ಗಸೂಚಿ ಕ್ರಮಗಳು ಜಾರಿಯಲ್ಲಿವೆ. ಸರ್ಕಾರದ ಮಾರ್ಗಸೂಚಿಯಂತೆ ವಿಶ್ವವಿಖ್ಯಾತ ಜೋಗದ ಜಲಪಾತ ಕೂಡ ವೀಕ್ಷಕರಿಗಾಗಿ ತೆರೆದುಕೊಂಡಿದೆ. ಇಂತಹ ಜೋಗದ ಜಲಪಾತವನ್ನು ವೀಕ್ಷಿಸಲು, ಪ್ರವಾಸಿಗರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಬೆಂಗಳೂರು ಟು ಜೋಗ ಜಲಪಾತ ಟೂರ್ ಪ್ಯಾಕೇಜ್ ಘೋಷಿಸಿದೆ.

ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಕೆ ಎಸ್ ಆರ್ ಟಿ ಸಿ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಲತಾ ಟಿ.ಎಸ್ ಅವರು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು – ಜೋಗ ಜಲಪಾತ ವಯಾ ಶಿವಮೊಗ್ಗ, ಸಾಗರ ಮಾರ್ಗವಾಗಿ ನಾನ್ ಎಸಿ ಸ್ಲೀಪರ್ ವಾಹನದೊಂದಿಗೆ ವಾರಾಂತ್ಯದ ದಿನಗಳಲ್ಲಿ (ಶ್ರಕ್ರವಾರ ಮತ್ತು ಶನಿವಾರ) ಟೂರ್ ಪ್ಯಾಕೇಜ್ ಅನ್ನು ದಿನಾಂಕ 23-07-2021ರಿಂದ ಪ್ರಾರಂಭಿಸಲಾಗುತ್ತಿದೆ ಎಂಬುದಾಗಿ ತಿಳಿಸಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img