Friday, July 30, 2021
Homeಸುದ್ದಿ ಜಾಲಮೈತ್ರಿ ಮಾಡಿಕೊಂಡಾದರೂ ಬಿಜೆಪಿಯನ್ನ ಸೋಲಿಸುತ್ತೇವೆ:ಪ್ರಿಯಾಂಕಾ ಗಾಂಧಿ

ಇದೀಗ ಬಂದ ಸುದ್ದಿ

ಮೈತ್ರಿ ಮಾಡಿಕೊಂಡಾದರೂ ಬಿಜೆಪಿಯನ್ನ ಸೋಲಿಸುತ್ತೇವೆ:ಪ್ರಿಯಾಂಕಾ ಗಾಂಧಿ

ಲಖನೌ: ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಾದರೂ ಬಿಜೆಪಿಯನ್ನು ಸೋಲಿಸುತ್ತೇವೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ.

ಭಾನುವಾರದಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರಿಗೆ ರಾಜ್ಯದ ಎಲ್ಲಾ 403 ವಿಧಾನಸಭಾ ಸ್ಥಾನಗಳಲ್ಲಿ ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸುತ್ತದೆಯೋ ಅಥವಾ ಕೆಲವು ರಾಜಕೀಯ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುತ್ತದೆಯೇ ಎನ್ನುವ ಪ್ರಶ್ನೆಯನ್ನು ಕೇಳಲಾಗಿತ್ತು. ಅದಕ್ಕೆ ಉತ್ತರಿಸಿದ ಅವರು, ‘ಈ ವಿಚಾರವಾಗಿ ಈಗ ಚರ್ಚಿಸುವುದು ಬೇಗ ಆಗುತ್ತದೆ. ನಾನು ಮೈತ್ರಿ ತಳ್ಳಿಹಾಕುವುದಿಲ್ಲ, ನಾವು ಮುಕ್ತ ಮನಸ್ಸನ್ನು ಹೊಂದಿದ್ದೇವೆ.’ ಎಂದು ತಿಳಿಸಿದ್ದಾರೆ.

ಒಟ್ಟಿನಲ್ಲಿ ಬಿಜೆಪಿಯನ್ನು ಸೋಲಿಸುವುದು ನಮ್ಮ ಉದ್ದೇಶ. ಅದಕ್ಕೆ ನಮ್ಮಂತೆ ಇತರ ರಾಜಕೀಯ ಪಕ್ಷಗಳು ಸಹ ಮುಕ್ತ ಮನಸ್ಸಿನವರಾಗಿರಬೇಕು ಎಂದು ಎಂದು ಪ್ರಿಯಾಂಕಾ ಹೇಳಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img