Friday, July 23, 2021
Homeಜಿಲ್ಲೆರಾಮನಗರಪರೀಕ್ಷಾ ಕೇಂದ್ರಗಳ ಪರಿಶೀಲನೆ ನಡೆಸಿದ ಶಿಕ್ಷಣ ಸಚಿವ ಸುರೇಶ್ ಕುಮಾರ್​

ಇದೀಗ ಬಂದ ಸುದ್ದಿ

ಪರೀಕ್ಷಾ ಕೇಂದ್ರಗಳ ಪರಿಶೀಲನೆ ನಡೆಸಿದ ಶಿಕ್ಷಣ ಸಚಿವ ಸುರೇಶ್ ಕುಮಾರ್​

ರಾಮನಗರ : ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಇಂದು ರಾಮನಗರ ಜಿಲ್ಲೆ ಬಿಡದಿಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಬಸವೇಶ್ವರ ಪ್ರೌಢಶಾಲೆ, ರಾಮನಗರದ ಶಾಂತಿನಿಕೇತನ ಶಾಲೆ, ಭಾರತೀಯ ಸಾಂಸ್ಕೃತಿ ವಿದ್ಯಾಪೀಠ, ಸರ್ಕಾರಿ ಪದವಿ ಪೂರ್ವ ಕಾಲೇಜು, ಚನ್ನಪಟ್ಟಣದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು, ಸೆಂಟ್ ಆನ್ಸ್ ಪ್ರೌಢಶಾಲೆ ಹಾಗೂ ಚನ್ನಪಟ್ಟಣದ ಚೆಕ್ಕೆರೆಯ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ಪರೀಕ್ಷಾ ಕೇಂದ್ರಗಳ ಪರಿಶೀಲನೆ ನಡೆಸಿದರು.

ಪರಿಶೀಲನೆಯ ಸಂದರ್ಭದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಪರೀಕ್ಷಾ ಕೇಂದ್ರದಲ್ಲಿ ಮಕ್ಕಳಿಗೆ ಪರೀಕ್ಷೆ ಬರೆಯಲು ಯಾವುದೇ ತೊಂದರೆಯಾಗದಂತೆ ವ್ಯವಸ್ಥೆಯಾಗಬೇಕು. ಪರೀಕ್ಷಾ ನೋಂದಣಿ ಸಂಖ್ಯೆ ವಿದ್ಯಾರ್ಥಿಗಳಿಗೆ ಗೋಚರವಾಗುವ ರೀತಿ ಪ್ರದರ್ಶನವಾಗಬೇಕು. ಈ ಬಾರಿ ಪರೀಕ್ಷೆ ಒಎಂಆರ್ ಶೀಟ್​ನಲ್ಲಿರುವ ಹಿನ್ನೆಲೆಯಲ್ಲಿ ಪರೀಕ್ಷಾ ನೋಂದಣಿ ಸಂಖ್ಯೆ ಸರಿಯಾಗಿ ವಿದ್ಯಾರ್ಥಿಗಳು ನಮೂದಿಸಿರುವ ಬಗ್ಗೆ ಪರೀಕ್ಷಾ ಮೇಲ್ವಿಚಾರಕರು ಪರಿಶೀಲಿಸುವಂತೆ ತಿಳಿಸಿದರು.

ಕೋವಿಡ್ ಪಾಸಿಟಿವ್​ ಇರುವ ವಿದ್ಯಾರ್ಥಿಗಳಿಗೆ ಹತ್ತಿರದ ಕೋವಿಡ್ ಕೇರ್ ಸೆಂಟರ್‌ನಲ್ಲಿ ಪರೀಕ್ಷೆ ಬರೆಯಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಜ್ವರ, ಕೆಮ್ಮು, ನೆಗಡಿ ಅಂತಹ ಲಕ್ಷಣ ಕಂಡು ಬಂದ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲೇ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ ಹಾಗೂ ಅವರಿಗೆ ಎನ್ 95 ಮಾಸ್ಕ್ ನೀಡಲಾಗುವುದು. ಮಾಸ್ಕ್ ಮರೆತು ಬಂದ ವಿದ್ಯಾರ್ಥಿಗಳಿಗೂ ಸಹ ಮಾಸ್ಕ್ ಕೊಡುವ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img