Sunday, August 1, 2021
Homeಸುದ್ದಿ ಜಾಲಮರೆಯಾದ 'ಕಾವೇರಿ ಪುತ್ರ'

ಇದೀಗ ಬಂದ ಸುದ್ದಿ

ಮರೆಯಾದ ‘ಕಾವೇರಿ ಪುತ್ರ’

ಹಿರಿಯ ರಾಜಕಾರಣಿ, ಮಾಜಿ ಲೋಕಸಭಾ ಸದಸ್ಯರು ಹಾಗೂ ಮಾಜಿ ಸಚಿವ ಜಿ.ಮಾದೇಗೌಡರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮಾದೇಗೌಡರ ಅಂತ್ಯಕ್ರಿಯೆ ಭಾನುವಾರ ಮಧ್ಯಾಹ್ನ 4ಕ್ಕೆ ಹನುಮಂತನಗರ ಎಂಬಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ ಎಂದು ಸಿಎಂ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಗಾಂಧಿವಾದಿಯಾಗಿ, ಗಾಂಧಿ ಅವರ ತತ್ವ ಆದರ್ಶಗಳನ್ನು ಜೀವನುದ್ದಕ್ಕೂ ಪಾಲಿಸಿದ ಮಾದೇಗೌಡರು, ಕಾವೇರಿ ಹೋರಾಟದಲ್ಲಿ ಸದಾ ಮುಂಚೂಣಿಯಲ್ಲಿದ್ದವರು. ರೈತ ಹೋರಾಟಗಳಲ್ಲಿ ಅವರು ಸಕ್ರಿಯರಾಗಿ ಅಪಾರ ಜನಮನ್ನಣೆ ಗಳಿಸಿದ್ದರು. ಕಿರುಗಾವಲು ವಿಧಾನಸಭಾ ಕ್ಷೇತ್ರದಿಂದ ಸತತ 6 ಬಾರಿ ಶಾಸಕರಾಗಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದರು.

 ವಯೋಸಹಜ ಕಾಯಿಲೆಯಿಂದ ನಿಧನರಾದರೈತ ಹಿತರಕ್ಷಣಾ ಸಮಿತಿ ಅಧ್ಯಕ್ಷ, ಕಾಂಗ್ರೆಸ್​ ಮುಖಂಡ, ಮಾಜಿ ಸಂಸದ ಜಿ. ಮಾದೇಗೌಡರು ಸಲ್ಲಿಸಿರುವ ಸಾಮಾಜಿಕ ಸೇವೆ ಅಪಾರವಾದದ್ದು. ರೈತ ಕುಟುಂಬದಲ್ಲಿ ಜನಿಸಿದ ಮಾದೇಗೌಡರು, ರೈತರಿಗಾಗಿ ಸಲ್ಲಿಸಿದ ಸೇವೆ ಶ್ಲಾಘನೀಯ.

ಕಾವೇರಿ ನದಿ ನೀರಿನ ಹಕ್ಕಿಗಾಗಿ ಮಾದೇಗೌಡರು ದೊಡ್ಡ ಮಟ್ಟದ ಹೋರಾಟ ನಡೆಸಿದ್ದಾರೆ. ಅವರು ಕಾವೇರಿ ಹಿತರಕ್ಷಣಾ ಸಮಿತಿಯ ಅಧ್ಯಕ್ಷರಾಗಿ ರೈತಪರ ಧ್ವನಿಯಾಗಿದ್ದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img