Friday, July 30, 2021
Homeಸುದ್ದಿ ಜಾಲಜೋಗ ವೀಕ್ಷಣೆಗೆ ಬಂದವರಿಗೆ ಇವತ್ತು ನಿರಾಸೆ

ಇದೀಗ ಬಂದ ಸುದ್ದಿ

ಜೋಗ ವೀಕ್ಷಣೆಗೆ ಬಂದವರಿಗೆ ಇವತ್ತು ನಿರಾಸೆ

ಜೋರು ಮಳೆಯ ನಡುವೆಯು ಶಿವಮೊಗ್ಗಕ್ಕೆ ಪ್ರವಾಸಿಗರ ಸಂಖ್ಯೆ ಹೆಚ್ಚಿದೆ. ಜೋಗ ಜಲಪಾತಕ್ಕೆ ಇವತ್ತು ದೊಡ್ಡ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ಆದರೆ ಜಲಪಾತ ಕಣ್ತುಂಬಿಕೊಳ್ಳಲು ಸಾಧ್ಯವಾಗದೆ ನಿರಾಸೆಯಿಂದ ಹಿಂತಿರುಗುವಂತಾಗಿದೆ.

ಕಳೆದ ರಾತ್ರಿಯಿಂದ ಸಾಗರ ತಾಲೂಕಿನಾದ್ಯಂತ ಭಾರಿ ಮಳೆಯಾಗುತ್ತಿದೆ. ಜೋಗ ಸುತ್ತಮುತ್ತಲು ಕೂಡ ನಿರಂತರ ಮಳೆ ಮತ್ತು ಮಂಜು ಮುಸುಕಿದ ವಾತಾವರಣವಿದೆ. ಹಾಗಾಗಿ ಜಲಪಾತ ಕಣ್ತುಂಬಿಕೊಳ್ಳುವುದು ಅಸಾಧ್ಯವಾಗಿದೆ.

ರಾಜ, ರಾಣಿ, ರೋರರ್, ರಾಕೆಟ್ ಜಲಪಾತಗಳು ಧುಮ್ಮಿಕ್ಕುವ ಸದ್ದು ಕೇಳುತ್ತಿದೆ. ಆದರೆ ಜಲಪಾತವನ್ನು ಕಣ್ತುಂಬಿಕೊಳ್ಳಲು ಅಸಾಧ್ಯವಾಗಿದೆ.

ಭಾನುವಾರ ಆಗಿರುವುದರಿಂದ ದೂರದ ಊರುಗಳಿಂದ ಪ್ರವಾಸಿಗರು ಜೋಗಕ್ಕೆ ಭೇಟಿ ನೀಡಿದ್ದಾರೆ. ಆದರೆ ಜಲಪಾತ ಕಾಣಸಿಗದೆ ನಿರಾಸೆಯಿಂದ ಹಿಂತಿರುಗುತ್ತಿದ್ದಾರೆ. ಫೋಟೊ, ಸೆಲ್ಫಿಗೆ ಅವಕಾಶ ಸಿಗದೆ ಬೇಸರದಿಂದಲೆ ಮರಳುತ್ತಿದ್ದಾರೆ.

ಮಳೆ ಆರಂಭವಾಗುತ್ತಿದ್ದಂತೆ ಜೋಗ ಜಲಪಾತ ಜೀವಕಳೆ ಪಡೆದುಕೊಂಡಿದೆ. ಕೋವಿಡ್ ಕಾರಣದಿಂದಾಗಿ ಕೆಲವು ದಿನ ಜಲಪಾತ ವೀಕ್ಷಣೆಗೆ ಸರ್ಕಾರ ನಿರ್ಬಂಧ ವಿಧಿಸಿತ್ತು. ಆದರೆ ಈಗ ನಿರ್ಬಂಧ ತೆರವಾದ ಬಳಿಕ ಪ್ರತಿ ವೀಕೆಂಡ್ನಲ್ಲಿ ಸಾವಿರಾರು ಜನರು ಜೋಗ ಜಲಪಾತಕ್ಕೆ ಭೇಟಿ ನೀಡುತ್ತಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img