Thursday, July 29, 2021
Homeಜಿಲ್ಲೆಬೆಂಗಳೂರುನಾಳೆಯಿಂದ ದೇವಸ್ಥಾನಗಳಲ್ಲಿ ಭಕ್ತರಿಂದ ಪೂಜೆ, ಪುರಸ್ಕಾರಕ್ಕೆ ಗ್ರೀನ್ ಸಿಗ್ನಲ್

ಇದೀಗ ಬಂದ ಸುದ್ದಿ

ನಾಳೆಯಿಂದ ದೇವಸ್ಥಾನಗಳಲ್ಲಿ ಭಕ್ತರಿಂದ ಪೂಜೆ, ಪುರಸ್ಕಾರಕ್ಕೆ ಗ್ರೀನ್ ಸಿಗ್ನಲ್

ಬೆಂಗಳೂರು : ಇಂದು ಮುಖ್ಯಮಂತ್ರಿಗಳು ತಮ್ಮ ನಿವಾಸದಲ್ಲಿ ಸಚಿವರು ಹಾಗು ಅಧಿಕಾರಿಗಳ ಜೊತೆ ಕೋವಿಡ್ -19 ರ ಕುರಿತು ಚರ್ಚೆ ನಡೆಸಿದರು. ಈ ಸಭೆಯಲ್ಲಿ ನಾಳೆಯಿಂದ ಶೇ.50ರಷ್ಟು ಸೀಟುಗಳ ಭರ್ತಿಯೊಂದಿಗೆ ಚಿತ್ರಮಂದಿರ ಹಾಗೂ ಜುಲೈ.26ರಿಂದ ಪದವಿ ಕಾಲೇಜುಗಳನ್ನು ತೆರೆಯೋದಕ್ಕೆ ಅನುಮತಿಸುವಂತ ನಿರ್ಣಯವನ್ನು ಕೈಗೊಂಡಿದೆ. ಇದಲ್ಲದೇ ನಾಳೆಯಿಂದ ದೇವಸ್ಥಾನಗಳಲ್ಲಿ ಭಕ್ತರಿಂದ ಪೂಜೆ, ಪುರಸ್ಕಾರಕ್ಕೂ ಅವಕಾಶ ನೀಡುವಂತ ನಿರ್ಣಯವನ್ನು ಕೈಗೊಂಡಿದೆ.

ಈ ಕುರಿತಂತೆ ಸಿಎಂ ನೇತೃತ್ವದ ಸಭೆಯ ಬಳಿಕ ಮಾಹಿತಿ ನೀಡಿದಂತ ಕಂದಾಯ ಸಚಿವ ಆರ್ ಅಶೋಕ್, ನಾಳೆಯಿಂದ ರಾಜ್ಯದಲ್ಲಿ ಅನ್ ಲಾಕ್ 4.0 ಜಾರಿಗೊಳಿಸಲಾಗುತ್ತಿದೆ. ಈ ಮಾರ್ಗಸೂಚಿಯಂತೆ ನೈಟ್ ಕರ್ಪ್ಯುನ್ನು ರಾತ್ರಿ 10 ರಿಂದ ಬೆಳಗ್ಗೆ 5 ರ ವರಗೆ ವಿದಿಸಲು ತೀರ್ಮಾನಿಸಲಾಗಿದೆ. ಸಿನಿಮಾ ಥಿಯೇಟರ್, ರಂಗಮಂದಿರಗಳನ್ನು ಶೇ. 50ರಷ್ಟು ಜನರೊಂದಿಗೆ ತೆರೆಯಲು ಅವಕಾಶ ನೀಡಲು ತೀರ್ಮಾನಿಸಲಾಗಿದೆ ಎಂಬುದಾಗಿ ತಿಳಿಸಿದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img