Friday, July 30, 2021
Homeಸುದ್ದಿ ಜಾಲಪಿಎಂ ಸರ್ವಪಕ್ಷ ಸಭೆ

ಇದೀಗ ಬಂದ ಸುದ್ದಿ

ಪಿಎಂ ಸರ್ವಪಕ್ಷ ಸಭೆ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಪ್ರಾರಂಭವಾಗುವುದಕ್ಕೆ ಒಂದು ದಿನ ಮೊದಲು ಪ್ರಧಾನಿ ನರೇಂದ್ರ ಮೋದಿ ಅವರು ಸರ್ವಪಕ್ಷ ಸಭೆ ನಡೆಸಿದರು. ಈ ಸಭೆಯಲ್ಲಿ 33 ಪಕ್ಷಗಳ 40ಕ್ಕೂ ಹೆಚ್ಚು ನಾಯಕರು ಭಾಗವಹಿಸಿದ್ದರು ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್​ ಜೋಶಿ ತಿಳಿಸಿದ್ದಾರೆ.

ಸರ್ವಪಕ್ಷ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಮಾನ್ಸೂನ್ ಅಧಿವೇಶನದಲ್ಲಿ ಪ್ರತಿಪಕ್ಷಗಳು ಸೇರಿದಂತೆ ಎಲ್ಲಾ ಸದಸ್ಯರು ನೀಡುವ ಸಲಹೆ ಮತ್ತು ಸೂಚನೆಗಳು ತುಂಬಾ ಮೌಲ್ಯಯುತವಾಗಿವೆ ಎಂದಿದ್ದಾರೆ ಎಂದು ಜೋಶಿ ಸ್ಪಷ್ಟನೆ ನೀಡಿದ್ದಾರೆ.

ಪ್ರಹ್ಲಾದ್​ ಜೋಶಿ ಹೇಳುವಂತೆ, ಸಂಸತ್ತಿನಲ್ಲಿ ಆರೋಗ್ಯಕರ ಮತ್ತು ಫಲಪ್ರದ ಚರ್ಚೆಗಳು ನಡೆಯಬೇಕು. ಸಂಸತ್ತಿನ ನಿಯಮಗಳು ಮತ್ತು ಕಾರ್ಯವಿಧಾನಗಳಿಗೆ ಅನುಗುಣವಾಗಿದ್ದರೆ ಆಡಳಿತ ಪಕ್ಷ ಯಾವುದೇ ವಿಷಯದ ಬಗ್ಗೆ ಚರ್ಚೆ ನಡೆಸಲು ಸರ್ಕಾರ ಸಿದ್ಧವಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img