Friday, July 30, 2021
Homeಸುದ್ದಿ ಜಾಲಮಾದೇಗೌಡರ ಅಂತಿಮ ದರ್ಶನ ಪಡೆದ ಸಿದ್ದರಾಮಯ್ಯ

ಇದೀಗ ಬಂದ ಸುದ್ದಿ

ಮಾದೇಗೌಡರ ಅಂತಿಮ ದರ್ಶನ ಪಡೆದ ಸಿದ್ದರಾಮಯ್ಯ

ಮಂಡ್ಯ: ಭಾರತಿ ಕಾಲೇಜು ಆವರಣದಲ್ಲಿ ದಿ.ಜಿ. ಮಾದೇಗೌಡರ ಮೃತದೇಹದ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ರಾಜಕೀಯ ಗಣ್ಯರು, ಸ್ವಾಮೀಜಿಗಳು ಹಾಗೂ ಸಾರ್ವಜನಿಕರು ಅಂತಿಮ ನಮನ ಸಲ್ಲಿಸಿದರು.

ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್, ಸಚಿವ ನಾರಾಯಣಗೌಡ, ಸಿನಿಮಾ ನಿರ್ದೇಶಕ ಪ್ರೇಮ್ ಸೇರಿದಂತೆ ಹಲವರು ನಮನ ಸಲ್ಲಿಸಿದರು.

ಬಳಿಕ ಮಾತನಾಡಿದ ಆದಿಚುಂಚನಗಿರಿ ಶ್ರೀಗಳು, ಮಾದೇಗೌಡರಿಗೆ ಆಧ್ಯಾತ್ಮಿಕವಾಗಿ ಒಲವಿತ್ತು. ಅವರು ಮಠಕ್ಕೂ‌ ಬರುತ್ತಿದ್ದರು. ಅವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಪ್ರಾರ್ಥನೆ ಮಾಡುತ್ತೇನೆ ಎಂದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img