Friday, July 23, 2021
Homeಜಿಲ್ಲೆಬೆಂಗಳೂರುನಾಳೆಯಿಂದ ರಾಜ್ಯಾದ್ಯಂತ `SSLC' ಪರೀಕ್ಷೆ ಆರಂಭ

ಇದೀಗ ಬಂದ ಸುದ್ದಿ

ನಾಳೆಯಿಂದ ರಾಜ್ಯಾದ್ಯಂತ `SSLC’ ಪರೀಕ್ಷೆ ಆರಂಭ

ಬೆಂಗಳೂರು : ನಾಳೆಯಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್ ಸಿ ಪರೀಕ್ಷೆ ಆರಂಭವಾಗುತ್ತಿದ್ದು, ನಾಳೆ ಗಣಿತ, ವಿಜ್ಞಾನ, ಸಮಾಜ ವಿಷಯಗಳಿಗೆ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಬರೆಯಲು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30 ರವರಗೆ ಸಮಯವಿರುತ್ತದೆ.

ಈ ಬಾರಿಯ ಎಸ್‌ಎಸ್‌ಎಲ್ ಸಿ ಪರೀಕ್ಷೆಗೆ ಒಟ್ಟು 8,76,581 ವಿದ್ಯಾರ್ಥಿಗಳ ನೋಂದಣಿಯಾಗಿದ್ದು, ಇದರಲ್ಲಿ 4,72,643 ಬಾಲಕರುಉ ಮತ್ತು 40,49,38 ಬಾಲಕಿಯರು ಪರೀಕ್ಷೆ ಬರೆಯಲಿದ್ದಾರೆ. ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಒಂದು ಕೊಠಡಿಯಲ್ಲಿ 12 ಮಕ್ಕಳಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಕೆಮ್ಮು, ನೆಗಡಿ, ಜ್ವರ ಇರುವ ಮಕ್ಕಳಿಗೆ ವಿಶೇಷ ಕೊಠಡಿಯಲ್ಲಿ ಕೂರಿಸಲಾಗುವುದು.

ಪರೀಕ್ಷೆಗೆ 14,927 ಶಾಲೆಗಳನ್ನು ನೊಂದಾಯಿಸಲಾಗಿದೆ. 4,884 ರಷ್ಟು ಪರೀಕ್ಷಾ ಕೇಂದ್ರಗಳಿವೆ. ರಾಜ್ಯಾದ್ಯಂತ 73,066 ಪರೀಕ್ಷಾ ಕೊಠಡಿಗಳಿವೆ. 4,884 ಮುಖ್ಯ ಅಧಿಕ್ಷಕರು, 4,884 ಪ್ರಶ್ನೆ ಪತ್ರಿಕೆ ಅಭಿರಕ್ಷಕರು, 80,389 ಕೊಠಡಿ ಮೇಲ್ವಿಚಾರಕರು, 4,884 ಸ್ಥಾನಿಕ ಜಾಗೃತ ದಳದವರನ್ನು ನೇಮಕ ಮಾಡಲಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img