Sunday, August 1, 2021
Homeಸುದ್ದಿ ಜಾಲಆಡಿಯೋ ಯಾರು ವೈರಲ್ ಮಾಡಿದ್ದಾರೆ ತನಿಖೆಯಾಗಬೇಕು : ಈಶ್ವರಪ್ಪ

ಇದೀಗ ಬಂದ ಸುದ್ದಿ

ಆಡಿಯೋ ಯಾರು ವೈರಲ್ ಮಾಡಿದ್ದಾರೆ ತನಿಖೆಯಾಗಬೇಕು : ಈಶ್ವರಪ್ಪ

ಶಿವಮೊಗ್ಗ : ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರದ ಚರ್ಚೆ ಈಗ ವೇಗ ಪಡೆದುಕೊಂಡಿದೆ. ನಳೀನ್ ಕುಮಾರ್ ಕಟೀಲ್ ಮಾತನಾಡಿದ್ದಾರೆ ಎಂದು ಹೇಳಲಾದ ಆಡಿಯೋಈ ಈಗ ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಮೂಡಿಸಿದೆ. ಈ ಹಿನ್ನೆಲೆಯಲ್ಲಿ, ಆಡಿಯೋ ನನ್ನದಲ್ಲ ಎಂದು ನಳಿನ್ ಕುಮಾರ್ ಹೇಳಿದ್ದಾರೆ. ಹೀಗಾಗಿ ಈ ಬಗ್ಗೆ ತನಿಖೆ ಅಗತ್ಯವಿಲ್ಲ ಎಂದು ಸಚಿವ ಕೆ. ಎಸ್ ಈಶ್ವರಪ್ಪ ಹೇಳಿದ್ದಾರೆ.

ನಳೀನ್ ಕುಮಾರ್ ಕಟೀಲು ಆಡಿಯೋ ನನ್ನದಲ್ಲ ಎಂದು ಹೇಳಿದ್ದಾರೆ. ಯಾರೋ ಹುಚ್ಚರು ಹೀಗೆ ಮಾಡಿದ್ದಾರೆ. ಯಾರೋ ಆಡಿಯೋವನ್ನು ಸೃಷ್ಟಿ ಮಾಡಿದ್ದಾರೆ. ಆಡಿಯೋ ಯಾರು ವೈರಲ್ ಮಾಡಿದ್ದಾರೆ ಎಂಬ ಬಗ್ಗೆ ತನಿಖೆಯಾಗಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ನಳೀನ್ ಕುಮಾರ್ ಕಟೀಲು ಅವರನ್ನು ಈ ವಿಷಯದಲ್ಲಿ ಬಲಿಪಶು ಮಾಡಬೇಡಿ. ಬಿಜೆಪಿಗೆ ಸಂಪೂರ್ಣ ಬಹುಮತ ಬಂದಿದ್ದರೆ ಇಂದು ಈ ರೀತಿಯ ಗೊಂದಲ ಸೃಷ್ಟಿಯಾಗುತ್ತಿರಲಿಲ್ಲ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಸಂಪೂರ್ಣ ಬಹುಮತ ಪಡೆಯುತ್ತೇವೆ ಎಂದು ಅವರು ಹೇಳಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img