Sunday, August 1, 2021
Homeಸುದ್ದಿ ಜಾಲಸಿಎಂ ಸ್ಥಾನ ಬದಲಾವಣೆ ಮಾಡಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತೆ: ರಂಭಾಪುರಿ ಶ್ರೀ

ಇದೀಗ ಬಂದ ಸುದ್ದಿ

ಸಿಎಂ ಸ್ಥಾನ ಬದಲಾವಣೆ ಮಾಡಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತೆ: ರಂಭಾಪುರಿ ಶ್ರೀ

ರಾಯಚೂರು: ಬಿ.ಎಸ್.ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಬದಲಾವಣೆ ಮಾಡಿದರೆ ಬಿಜೆಪಿ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠ ಜಗದ್ಗುರು ಶ್ರೀ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ಹೇಳಿದ್ದಾರೆ.

ರಾಯಚೂರಿನ ಕಿಲ್ಲೇ ಬೃಹನ್​ ಮಠದದಲ್ಲಿ ಮಾತನಾಡಿದ ಅವರು, ರಾಜಕೀಯ ಕ್ಷೇತ್ರ ಎನ್ನುವುದು ಸಂಘರ್ಷವಿದ್ದಂತೆ. ಬಿ.ಎಸ್.ಯಡಿಯೂರಪ್ಪ ಅವರನ್ನು ಸಿಎಂ ಕುರ್ಚಿಯಿಂದ ಕೆಳಗಿಳಿಸಿದ್ರೆ, ಮುಂದಿನ ದಿನಗಳಲ್ಲಿ ಬಿಜೆಪಿ ದೊಡ್ಡ ಪರಿಣಾಮ ಎದುರಿಸಬೇಕಾಗುತ್ತದೆ. ಈ ಇಳಿವಯಸ್ಸಿನಲ್ಲೂ ಯಡಿಯೂರಪ್ಪ ರಾಜ್ಯಕ್ಕೆ ಉತ್ತಮ ಆಡಳಿತ ನೀಡುತ್ತಿದ್ದು, ಎಲ್ಲ ಜಾತಿ, ಜನಾಂಗದವರು ಅವರನ್ನು ಬೆಂಬಲಿಸಿವೆ ಎಂದರು.

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕೊರೊನಾ, ನೆರೆ ಸೇರಿ ಪ್ರಾಕೃತಿಕ ವಿಕೋಪಗಳು ಸಂಭವಿಸಿದವು. ಅವುಗಳೆಲ್ಲವನ್ನೂ ಯಡಿಯೂರಪ್ಪ ಸಮರ್ಥವಾಗಿ ನಿಭಾಯಿಸಿದ್ದಾರೆ. ಹೀಗಾಗಿ, ರಾಷ್ಟ್ರೀಯ ನಾಯಕರು ಯಡಿಯೂರಪ್ಪರನ್ನೇ ಮುಖ್ಯಮಂತ್ರಿಯಾಗಿ ಮುಂದುವರಿಸಲಿದ್ದಾರೆ ಅನ್ನೋ ವಿಶ್ವಾಸವಿದೆ. ಯಡಿಯೂರಪ್ಪಗೆ ಸುತ್ತೂರು ಶ್ರೀಗಳು, ಆದಿ ಚುಂಚನಗಿರಿ ಶ್ರೀಗಳು ಸೇರಿ ಬಹುತೇಕ ಮಠಾಧೀಶರು ಬೆಂಬಲ ಸೂಚಿಸಿದ್ದಾರೆ ಎಂದು ಮಾಹಿತಿ ನೀಡಿದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img