Sunday, August 1, 2021
Homeಜಿಲ್ಲೆಬೆಂಗಳೂರುSSLC ವಿದ್ಯಾರ್ಥಿಗಳಿಗೆ ಸಿಎಂ ಬಿಎಸ್ ವೈ ಶುಭ ಹಾರೈಕೆ

ಇದೀಗ ಬಂದ ಸುದ್ದಿ

SSLC ವಿದ್ಯಾರ್ಥಿಗಳಿಗೆ ಸಿಎಂ ಬಿಎಸ್ ವೈ ಶುಭ ಹಾರೈಕೆ

ಬೆಂಗಳೂರು : ಜುಲೈ.19ರ ಇಂದು ಮತ್ತು ಜುಲೈ.22ರಂದು ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಗಾಗಿ ಈಗಾಗಲೇ ಪರೀಕ್ಷಾ ಕೇಂದ್ರಗಳನ್ನು ಸಂಪೂರ್ಣ ಸಿದ್ಧಗೊಳಿಸಲಾಗಿದೆ. ಇಂದು ಬೆಳಿಗ್ಗೆ 8.30ರಿಂದಲೇ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಆಗಮಿಸುವಂತೆ ಸಜ್ಜುಗೊಂಡಿದ್ದು, ಕೊರೋನಾ ಮುಂಜಾಗ್ರತೆಯಲ್ಲಿ ಪರೀಕ್ಷೆಯನ್ನು ಸುರಕ್ಷಿತ ಕೇಂದ್ರಗಳೆಂದು ಭಾಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವಂತೆ ಸರ್ಕಾರ ಮನವಿ ಮಾಡಿದೆ. ಇಂತಹ ಇಂದಿನ ಪರೀಕ್ಷೆಗೆ ಹಾಜರಾಗುತ್ತಿರುವಂತ ಎಲ್ಲಾ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಶುಭ ಹಾರೈಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಬಿ.ಎಸ್. ಯಡಿಯೂರಪ್ಪ, ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲ ಮಕ್ಕಳಿಗೆ ಶುಭ ಹಾರೈಕೆಗಳು. ಎಲ್ಲರೂ ಶಾಂತಚಿತ್ತರಾಗಿ, ಏಕಾಗ್ರತೆಯಿಂದ ಮತ್ತು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ. ಪರೀಕ್ಷೆಗಳನ್ನು ಸುರಕ್ಷಿತವಾಗಿ ಮತ್ತು ಸುಗಮವಾಗಿ ನಡೆಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಎಲ್ಲಾ ವ್ಯವಸ್ಥೆಗಳನ್ನು ಮಾಡಿದೆ ಎಂದು ಪಾಲಕರಿಗೆ ಭರವಸೆ ನೀಡುತ್ತೇನೆ ಎಂದು ಹೇಳಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img