Friday, July 30, 2021
Homeಸುದ್ದಿ ಜಾಲSSLC ಪರೀಕ್ಷಾ ಕೇಂದ್ರದಲ್ಲಿ ಅಗ್ನಿ ಅವಘಡ

ಇದೀಗ ಬಂದ ಸುದ್ದಿ

SSLC ಪರೀಕ್ಷಾ ಕೇಂದ್ರದಲ್ಲಿ ಅಗ್ನಿ ಅವಘಡ

ದಕ್ಷಿಣ ಕನ್ನಡ : ಇಂದಿನಿಂದ ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭಗೊಂಡಿದೆ. ಇಂತಹ ದಿನವೇ ದಕ್ಷಿಣ ಕನ್ನಡ ಜಿಲ್ಲೆಯ ಪರೀಕ್ಷಾ ಕೇಂದ್ರದಲ್ಲಿಯೇ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಆದ್ರೇ ಶಿಕ್ಷಕರ ಸಮಯ ಪ್ರಜ್ಞೆಯಿಂದ ಮುಂದಾಗಲಿದ್ದ ಅನಾಹುತ ಕೂಡ ತಪ್ಪಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಸಮೀಪದ ಬಬ್ಬುಕಟ್ಟೆಯಲ್ಲಿನ ಖಾಸಗಿ ಶಾಲೆಯೊಂದರಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಲ್ಯಾಬ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದೇ ಲ್ಯಾಬ್ ಸಮೀಪವೇ ಇದ್ದಂತ ಎಸ್ ಎಸ್ ಎಲ್ ಸಿ ಪರೀಕ್ಷಾ ಕೊಠಡಿಗೂ, ಪರೀಕ್ಷೆ ಆರಂಭವಾದಂತ ಅರ್ಧ ಗಂಟೆಯಲ್ಲಿ ಚಾಚಿದೆ. ಕೂಡಲೇ ಸ್ಥಳದಲ್ಲಿದ್ದಂತ ಶಿಕ್ಷಕರು ವಿದ್ಯಾರ್ಥಿಗಳನ್ನು ಪರೀಕ್ಷೆಗಾಗಿ ಬೇರೊಂದು ಕಟ್ಟಡದಲ್ಲಿ ವ್ಯವಸ್ಥೆ ಮಾಡಿದ್ದಾರೆ. ಈ ಮೂಲಕ ಮುಂದಾಗಲಿದ್ದ ಭಾರೀ ಅನಾಹುತವನ್ನು ತಪ್ಪಿಸಿದ್ದಾರೆ.

ಈ ವಿಷಯ ತಿಳಿಯುತ್ತಿದ್ದಂತ ಸ್ಥಳಕ್ಕೆ ಆಗಮಿಸಿದಂತ ಉಳ್ಳಾಲದ ಅಗ್ನಿಶಾಮಕದಳದ ಸಿಬ್ಬಂದಿಗಳು ಬೆಂಕಿ ನಂದಿಸಿ, ಹತೋಟಿಗೆ ತಂದಿದ್ದಾರೆ. ಈ ಅಗ್ನಿ ಅವಘಡ ವಿದ್ಯುತ್ ಶಾರ್ಟ್ ಸೆರ್ಕ್ಯೂಟ್ ನಿಂದ ಉಂಟಾಗಿದೆ ಎಂದು ಹೇಳಲಾಗುತ್ತಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img