Friday, July 23, 2021
Homeಸುದ್ದಿ ಜಾಲಭಾರತದಲ್ಲಿ ಕಳೆದ 24ಗಂಟೆಯಲ್ಲಿ 38,164 ಕೋವಿಡ್ ಪ್ರಕರಣ ಪತ್ತೆ

ಇದೀಗ ಬಂದ ಸುದ್ದಿ

ಭಾರತದಲ್ಲಿ ಕಳೆದ 24ಗಂಟೆಯಲ್ಲಿ 38,164 ಕೋವಿಡ್ ಪ್ರಕರಣ ಪತ್ತೆ

ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 38,164 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 499 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ (ಜುಲೈ19) ಬಿಡುಗಡೆಗೊಳಿಸಿರುವ ಅಂಕಿ-ಅಂಶದಲ್ಲಿ ತಿಳಿಸಿದೆ.

ದೇಶದಲ್ಲಿ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 3,11,44,229ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,14,108ಕ್ಕೆ ಹೆಚ್ಚಳವಾಗಿದೆ ಎಂದು ವರದಿ ಹೇಳಿದೆ.

ಭಾರತದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 4,21,665ಕ್ಕೆ ಇಳಿಕೆಯಾಗಿದೆ. ವಾರದ ಪಾಸಿಟಿವಿಟಿ ದರ ಶೇ.2.08ಕ್ಕೆ ಇಳಿದಿದ್ದು, ದಿನದ ಪಾಸಿಟಿವಿಟಿ ದರ ಶೇ.2.61ಕ್ಕೆ ಇಳಿಕೆಯಾಗಿರುವುದಾಗಿ ಅಂಕಿಅಂಶ ವಿವರಿಸಿದೆ.

ಕಳೆದ 24ಗಂಟೆಗಳಲ್ಲಿ 38,660 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದಾರೆ. ಇದರೊಂದಿಗೆ ಒಟ್ಟು ಈವರೆಗೆ 3,03,08,456 ಮಂದಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಚೇತರಿಕೆ ಪ್ರಮಾಣ ಕೂಡಾ ಶೇ.97.32ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img