Sunday, August 1, 2021
Homeಸಿನಿಮಾಡಿ ಬಾಸ್ ಬೆಂಬಲಕ್ಕೆ ನಿಂತ ಸಂಸದ ಪಿ.ಸಿ ಮೋಹನ್

ಇದೀಗ ಬಂದ ಸುದ್ದಿ

ಡಿ ಬಾಸ್ ಬೆಂಬಲಕ್ಕೆ ನಿಂತ ಸಂಸದ ಪಿ.ಸಿ ಮೋಹನ್

ಬೆಂಗಳೂರು : ಬಿಜೆಪಿ ಸಂಸದ ಪಿ.ಸಿ. ಮೋಹನ್ ಅವರು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಬೆಂಬಲಕ್ಕೆ ನಿಂತಿದ್ದಾರೆ. ದರ್ಶನ್ ಅವರ ವ್ಯಕ್ತಿತ್ವ ಎಂತಹದು ಎಂಬುದನ್ನು ಸಾರಿ ಹೇಳಿದ್ದಾರೆ.

ಇಂದು (ಜುಲೈ 19) ಟ್ವೀಟ್ ಮಾಡಿರುವ ಅವರು, ಹಲವು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಕಲಾ ಸೇವೆ ಸಲ್ಲುಸುತ್ತಿರುವ ದರ್ಶನ್ ತುಗೂದೀಪ ಅವರು ನನಗೆ ಆತ್ಮೀಯರು. ಚಾಲೆಂಜಿಂಗ್ ಸ್ಟಾರ್ ಯಾರೇ ಕಷ್ಟ ಎಂದರೂ ಸಹಾಯಕ್ಕೆ ನಿಲ್ಲುತ್ತಾರೆ. ರೈತರ ಹೋರಾಟ, ರೈತರ – ಕಲಾವಿದರ ಕಷ್ಟ, ಪ್ರಾಣಿಗಳ ಸಂಕಷ್ಟ ಅಂತಾ ಬಂದಾಗ ಒಂದು ಹೆಜ್ಜೆ ಮುಂದೆ ಬರುವುದು ದರ್ಶನ್ ಎಂದು ಕರ್ನಾಟಕಕ್ಕೇ ತಿಳಿದಿದೆ ಎಂದಿದ್ದಾರೆ.

ದರ್ಶನ್ ಅವರ ಕುರಿತು ಕೇಳಿ ಬಂದಿರುವ ಹಲ್ಲೆ ಆರೋಪದ ಕುರಿತು ಮಾತಾಡಿರುವ ಪಿ.ಸಿ ಮೋಹನ್, ಯಾವುದೇ ಆಧಾರವಿಲ್ಲದೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮೇಲೆ ಅನಗತ್ಯ ಆರೋಪ ಮಾಡಿ , ಅವರ ತೇಜೋವಧೆಗೆ ಯತ್ನಿಸುತ್ತಿರುವುದು ಕನ್ನಡ ಚಿತ್ರರಂಗಕ್ಕೆ ಶೋಭೆ ತರುವುದಿಲ್ಲ. ಚಿತ್ರರಂಗದ ಹಿರಿಯರು ಹಾಗೂ ವಾಣಿಜ್ಯ ಮಂಡಳಿ ಮಧ್ಯ ಪ್ರವೇಶಿಸಿ ಎಲ್ಲಾ ಗೊಂದಲಗಳನ್ನು ನಿವಾರಿಸಬೇಕೆಂದು ವಿನಂತಿಸಿಕೊಂಡಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img