Sunday, August 1, 2021
Homeಸುದ್ದಿ ಜಾಲಒಲಿಂಪಿಕ್ಸ್ ಕ್ರೀಡಾಪಟುಗಳಿಗೆ ಶುಭಕೋರಿದ ಸಚಿನ್ ತೆಂಡೂಲ್ಕರ್

ಇದೀಗ ಬಂದ ಸುದ್ದಿ

ಒಲಿಂಪಿಕ್ಸ್ ಕ್ರೀಡಾಪಟುಗಳಿಗೆ ಶುಭಕೋರಿದ ಸಚಿನ್ ತೆಂಡೂಲ್ಕರ್

ಮುಂಬೈ: ಜುಲೈ 23ರಿಂದ ಒಲಿಂಪಿಕ್ಸ್​ ಕ್ರೀಡಾಕೂಟ ಆರಂಭವಾಗಲಿದೆ. ಈಗಾಗಲೇ ಮೊದಲ ಹಂತದ ಭಾರತದ ಕ್ರೀಡಾಪಟುಗಳು ಟೋಕಿಯೋ ಸೇರಿಕೊಂಡಿದ್ದಾರೆ. ಪ್ರಧಾನಿ ಸೇರಿದಂತೆ ದೇಶದ ಗಣ್ಯರು, ಕ್ರೀಡಾ ದಿಗ್ಗಜರು ಕ್ರೀಡಾಪಟುಗಳಿಗೆ ಶುಭಾಶಯ ಕೋರಿದ್ದಾರೆ. ಭಾರತೀಯ ಕ್ರಿಕೆಟ್ ದಂತಕತೆ ಸಚಿನ್ ತೆಂಡೂಲ್ಕರ್ ಕೂಡ ಕ್ರೀಡಾಪಟುಗಳಿಗೆ ವಿಡಿಯೋ ಸಂದೇಶದ ಮೂಲಕ ಹುರಿದುಂಬಿಸಿದ್ದಾರೆ.

ಇದಕ್ಕೂ ಮೊದಲು ಭಾರತ ತಂಡದ ನಾಯಕ ವಿರಾಟ್​ ಕೊಹ್ಲಿ, ಮಹಿಳಾ ತಂಡದ ನಾಯಕಿ ಮಿಥಾಲಿ ರಾಜ್ ಕೂಡ ಚಿಯರ್ ಫಾರ್ ಇಂಡಿಯಾ ಆಂದೋಲನಕ್ಕೆ ಕೈ ಜೋಡಿಸಿದ್ದರು.

ಬಿಸಿಸಿಐ ಕೂಡ ಒಲಿಂಪಿಕ್ಸ್​ನಲ್ಲಿ ಪಾಲ್ಗೊಳ್ಳುವ ಭಾರತೀಯ ಕ್ರೀಡಾಪಟುಗಳಿಗೆ ನೆರವಾಗುವುದಕ್ಕಾಗಿ 10 ಕೋಟಿ ರೂಪಾಯಿ ಘೋಷಿಸಿದೆ. ಇದೇ ಮೊದಲ ಬಾರಿಗೆ ಭಾರತದಿಂದ ಗರಿಷ್ಠ 129 ಅಥ್ಲೀಟ್​ಗಳು ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾಗವಹಿಸುತ್ತಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img