Friday, July 30, 2021
Homeಸುದ್ದಿ ಜಾಲಮುಂಬಯಿ ಷೇರುಪೇಟೆ ಸೆನ್ಸೆಕ್ಸ್ ಇಳಿಕೆ

ಇದೀಗ ಬಂದ ಸುದ್ದಿ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ ಇಳಿಕೆ

ಮುಂಬಯಿ: ಜಾಗತಿಕ ಷೇರುಮಾರುಕಟ್ಟೆಯಲ್ಲಿನ ದುರ್ಬಲ ವಹಿವಾಟಿನ ಪರಿಣಾಮ ಸೋಮವಾರ(ಜುಲೈ 19) ಮುಂಬಯಿ ಷೇರುಪೇಟೆ 587 ಅಂಕ ಇಳಿಕೆಯೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಳಿಸಿದೆ.

ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 586.66 ಅಂಕಗಳಷ್ಟು ಇಳಿಕೆಯಾಗಿದ್ದು, 52,533.40 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟು ಕೊನೆಗೊಳಿಸಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 171 ಅಂಕ ಕುಸಿತವಾಗಿದ್ದು, 15,752.40ರ ಗಡಿಗೆ ಕುಸಿದಿದೆ.

ಸೆನ್ಸೆಕ್ಸ್ ಇಳಿಕೆಯಿಂದ ಎಚ್ ಡಿಎಫ್ ಸಿ ಬ್ಯಾಂಕ್, ಇಂಡಸ್ ಇಂಡ್ ಬ್ಯಾಂಕ್, ಆಯಕ್ಸಿಸ್ ಬ್ಯಾಂಕ್, ಎಚ್ ಡಿಎಫ್ ಸಿ, ಮಾರುತಿ ಮತ್ತು ಬಜಾಜ್ ಫೈನಾನ್ಸ್ ಷೇರುಗಳು ನಷ್ಟ ಕಂಡಿದೆ. ಮತ್ತೊಂದೆಡೆ ಎನ್ ಟಿಪಿಸಿ, ನೆಸ್ಲೆ ಇಂಡಿಯಾ, ಡಾ.ರೆಡ್ಡೀಸ್ ಮತ್ತು ಸನ್ ಫಾರ್ಮಾ ಷೇರುಗಳು ಲಾಭ ಗಳಿಸಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img