Friday, July 23, 2021
Homeಜಿಲ್ಲೆಬೆಂಗಳೂರುಪರೀಕ್ಷಾ ಕೇಂದ್ರಗಳಿಗೆ ಭೇಟಿ ಕೊಟ್ಟ ಸಚಿವ ಸುರೇಶ್ ಕುಮಾರ್

ಇದೀಗ ಬಂದ ಸುದ್ದಿ

ಪರೀಕ್ಷಾ ಕೇಂದ್ರಗಳಿಗೆ ಭೇಟಿ ಕೊಟ್ಟ ಸಚಿವ ಸುರೇಶ್ ಕುಮಾರ್

ಬೆಂಗಳೂರು : ಇಂದಿನಿಂದ ರಾಜ್ಯಾದ್ಯಂತ ಎಸ್ಎಸ್​ಎಲ್​ಸಿ ಪರೀಕ್ಷೆ ಪ್ರಾರಂಭವಾಗಿದ್ದು, ನಗರದ ಕೆಲ ಪರಿಕ್ಷಾ ಕೇಂದ್ರಗಳಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪರೀಕ್ಷೆ ಆರಂಭಕ್ಕೂ ಮುನ್ನ ಬಸವೇಶ್ವರ ನಗರದ ಕಾರ್ಮೆಲ್ ಹೈಸ್ಕೂಲ್​ಗೆ ಭೇಟಿ ನೀಡಿದ ಸಚಿವರು ಪರಿಶೀಲನೆ ನಡೆಸಿದರು. ನಿಯಮದಂತೆ ಪರೀಕ್ಷಾ ಕೇಂದ್ರದ ಗೇಟ್ ಬಳಿ ಸ್ಯಾನಿಟೈಸ್ ಮತ್ತು ಥರ್ಮಲ್ ಸ್ಕ್ರೀನಿಂಗ್ ಮಾಡಿಕೊಂಡು ಸಚಿವರು ಒಳ ಹೋದರು. ಸಿಬ್ಬಂದಿಯಿಂದ ಸಿದ್ದತೆಗಳ ಬಗ್ಗೆ ಮಾಹಿತಿ ಪಡೆದು ಕೊಂಡರು.

ಪರೀಕ್ಷೆಯ ಮೊದಲ ದಿನವಾದ ಇಂದು ನಗರದ ಆರ್.ವಿ ಬಾಲಕಿಯರ ಹೈಸ್ಕೂಲ್, ವಿಜಯ ಪ್ರೌಢಶಾಲೆ, ಬಿ.ಇ.ಎಸ್​ ಪ್ರೌಢಶಾಲೆ, ಕಾರ್ಮೆಲ್ ಕಾನ್ವೆಂಟ್, ಕರ್ನಾಟಕ ಪಬ್ಲಿಕ್ ಶಾಲೆ ಸಾರಕ್ಕಿ ಹಾಗೂ ಸರ್ಕಾರಿ ವಾಣಿ ವಿಲಾಸ್ ಪದವಿಪೂರ್ವ ಕಾಲೇಜ್​ಗೆ ಸಚಿವ ಸುರೇಶ್ ಕುಮಾರ್ ಭೇಟಿ ನೀಡಲಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img