Friday, July 30, 2021
Homeಸುದ್ದಿ ಜಾಲವೈರಲ್ ಆಡಿಯೋಗೂ ನನಗೂ ಯಾವುದೇ ಸಂಬಂಧವಿಲ್ಲ:ನಳಿನ್ ಕುಮಾರ್

ಇದೀಗ ಬಂದ ಸುದ್ದಿ

ವೈರಲ್ ಆಡಿಯೋಗೂ ನನಗೂ ಯಾವುದೇ ಸಂಬಂಧವಿಲ್ಲ:ನಳಿನ್ ಕುಮಾರ್

ಮಂಗಳೂರು: ವೈರಲ್ ಆಡಿಯೋಗೂ ನನಗೂ ಯಾವುದೇ ಸಂಬಂಧವಿಲ್ಲ. ಈ ಬಗ್ಗೆ ಪೂರ್ಣ ತನಿಖೆಯಾಗಬೇಕೆಂದು ಸಿಎಂಗೆ ಪತ್ರ ಬರೆಯುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ನಿನ್ನೆಯಿಂದ ವೈರಲ್ ಆಗುತ್ತಿರುವ ನಳಿನ್ ಕುಮಾರ್ ಅವರದ್ದು ಎನ್ನಲಾದ ಆಡಿಯೋದ ಬಗ್ಗೆ ಪ್ರತಿಕ್ರಿಯಿಸಿದ ಅವರು, ತನಿಖೆಯಿಂದ ಸತ್ಯಾಸತ್ಯತೆ ಹೊರ ಬರಲಿ. ನಮ್ಮಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳೇ ಇಲ್ಲ. ಹಾಗಾಗಿ, ಈ ವಿಷಯ ಅಪ್ರಸ್ತುತ ಎಂದರು.

ಯಡಿಯೂರಪ್ಪ ನಮ್ಮ ಪಕ್ಷದ ಆತ್ಮ ಹಾಗೂ ಸರ್ವ ಸಮ್ಮತಿಯ ನಾಯಕ. ಈಶ್ವರಪ್ಪ ಹಾಗೂ ಜಗದೀಶ್ ಶೆಟ್ಟರ್ ಮುಂತಾದ ಹಿರಿಯ ನಾಯಕರ ಮಾರ್ಗದರ್ಶನದಲ್ಲಿ ನಮ್ಮ ಪಕ್ಷದ ಸರ್ಕಾರ ನಡೆಯುತ್ತಿದೆ ಎಂದು ಹೇಳಿದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img