Thursday, July 29, 2021
Homeದೆಹಲಿ24 ಗಂಟೆಗಳಲ್ಲಿ 30,093 ಜನರಿಗೆ ಸೋಂಕು

ಇದೀಗ ಬಂದ ಸುದ್ದಿ

24 ಗಂಟೆಗಳಲ್ಲಿ 30,093 ಜನರಿಗೆ ಸೋಂಕು

ನವದೆಹಲಿ : ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 30,093 ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ.

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 30,093 ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದೃಢಪಟ್ಟಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,11,74,322 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 374 ಕೊರೊನಾ ಸೋಂಕಿತರು ಮೃತಪಟ್ಟಿದ್ದು, ದೇಶದಲ್ಲಿ ಸೋಂಕಿಗೆ ಮೃತಪಟ್ಟವರ ಸಂಖ್ಯೆ 4,14,482 ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 45,254 ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾದಿಂದ ಗುಣಮುಖರಾದವರ ಸಂಖ್ಯೆ 3,03,53,710 ಕ್ಕೆ ಏರಿಕೆಯಾಗಿದೆ. ಸದ್ಯ ದೇಶದಲ್ಲಿ 4,06,130 ಸಕ್ರಿಯ ಪ್ರಕರಣಗಳಿವೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img