Friday, July 30, 2021
Homeಸುದ್ದಿ ಜಾಲಆದಿಚುಂಚನಗಿರಿ ಪೀಠಾಧ್ಯಕ್ಷ ನಿರ್ಮಲಾನಂದ ಸ್ವಾಮೀಜಿ ಹುಟ್ಟುಹಬ್ಬ

ಇದೀಗ ಬಂದ ಸುದ್ದಿ

ಆದಿಚುಂಚನಗಿರಿ ಪೀಠಾಧ್ಯಕ್ಷ ನಿರ್ಮಲಾನಂದ ಸ್ವಾಮೀಜಿ ಹುಟ್ಟುಹಬ್ಬ

ಬೆಂಗಳೂರು, ಜು.20- ಆದಿಚುಂಚನಗಿರಿ ಮಹಾಸಂಸ್ಥಾನ ಮಠದ 72ನೆ ಪೀಠಾಧ್ಯಕ್ಷರಾದ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರಿಗೆ ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡರು ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಈ ಸಂಬಂಧ ಟ್ವಿಟ್ ಮಾಡಿರುವ ಅವರು, ಶ್ರೀಗಳು ಶಾಂತಿ-ಸಹಬಾಳ್ವೆ ಮತ್ತು ಸುಧರ್ಮದ ಹಾದಿಯಲ್ಲಿ ನಡೆಯಲು ಲಕ್ಷಾಂತರ ಭಕ್ತಾದಿಗಳಿಗೆ ಪ್ರೇರಣೆಯಾಗುತ್ತ ನೂರ್ಕಾಲ ಬಾಳಲಿ ಎಂದು ಆಶಿಸಿದ್ದಾರೆ.

ಶ್ರೀಗಳ ಮಾರ್ಗದರ್ಶನ ನಮ್ಮೆಲ್ಲರಿಗೂ ಸ್ಫೂರ್ತಿಯಾಗಲಿ ಎಂದು ಅವರು ಹಾರೈಸಿದ್ದಾರೆ. ಅದೇ ರೀತಿ ವಿವಿಧ ರಾಜಕೀಯ ಪಕ್ಷಗಳ ನಾಯಕರು, ಸಮಾಜದ ಹಲವು ಗಣ್ಯರು ಶ್ರೀಗಳಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img