Thursday, July 29, 2021
Homeಸುದ್ದಿ ಜಾಲವಿಧಾನಸೌಧ ಕಾರಿಡಾರ್​ಗಳಲ್ಲಿ ಮಾಧ್ಯಮ ನಿರ್ಬಂಧ ಆದೇಶ ಹಿಂಪಡೆಯಲು ಸಿಎಂ ಸೂಚನೆ

ಇದೀಗ ಬಂದ ಸುದ್ದಿ

ವಿಧಾನಸೌಧ ಕಾರಿಡಾರ್​ಗಳಲ್ಲಿ ಮಾಧ್ಯಮ ನಿರ್ಬಂಧ ಆದೇಶ ಹಿಂಪಡೆಯಲು ಸಿಎಂ ಸೂಚನೆ

ಬೆಂಗಳೂರು: ವಿಧಾನಸೌಧದ ಕಾರಿಡಾರ್​ನಲ್ಲಿ ಮಾಧ್ಯಮಗಳ ನಿರ್ಬಂಧ ಆದೇಶವನ್ನು ಕೂಡಲೇ ಹಿಂಪಡೆಯುವಂತೆ ಮುಖ್ಯಮಂತ್ರಿ ಬಿ. ಎಸ್​​. ಯಡಿಯೂರಪ್ಪ ಅವರು ಮುಖ್ಯ ಕಾರ್ಯದರ್ಶಿ ರವಿಕುಮಾರ್​ ಅವರಿಗೆ ಸೂಚನೆ ನೀಡಿದ್ದಾರೆ.

ಕಾರಿಡಾರ್ ಓಡಾಟಕ್ಕೆ ನಿರ್ಬಂಧ ಆದೇಶದ ಬಗ್ಗೆ ಮಾಧ್ಯಮಗಳು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆ ಮುಖ್ಯ ಕಾರ್ಯದರ್ಶಿ ರವಿ ಕುಮಾರ್ ಕರೆದು‌ ಕೂಡಲೇ ಅದೇಶ ವಾಪಸ್​ಗೆ ಸಿಎಂ ಸೂಚನೆ ನೀಡಿದರು. ಮಾಧ್ಯಮದವರಿಗೆ ಯಾವುದೇ ನಿರ್ಬಂಧ ಮಾಡದಂತೆ ತಿಳಿಸಿದರು. ಅಲ್ಲದೆ ಮಾಧ್ಯಮದವರಿಗೆ ತೊಂದರೆಯಾಗದಂತೆ ನಡೆದುಕೊಳ್ಳಲು ಪೊಲೀಸರಿಗೂ ಸೂಚಿಸಿದರು.

ವಿಧಾನಸಭೆ ಹಾಗೂ ಪರಿಷತ್ತಿನ ಕಲಾಪಗಳು ಹಾಗೂ ಇನ್ನಿತರೇ ಸಂದರ್ಭಗಳಲ್ಲಿ ಮಾಧ್ಯಮದವರು ವಿಧಾನಸೌಧ ಕಟ್ಟಡದ ಕಾರಿಡಾರ್​ಗಳಲ್ಲಿ ವಿಡಿಯೋ ಚಿತ್ರೀಕರಣ ಮಾಡುವುದರಿಂದ ಗಣ್ಯ ವ್ಯಕ್ತಿಗಳ ಸುಗಮ ಚಲನವಲನಕ್ಕೆ ಅಡ್ಡಿಯುಂಟಾಗುತ್ತೆ ಎಂಬ ಹಿನ್ನೆಲೆ ಮಾಧ್ಯಮ ಓಡಾಟಕ್ಕೆ ನಿರ್ಬಂಧಿಸಿ ಆದೇಶ ಹೊರಡಿಸಲಾಗಿತ್ತು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img