Friday, July 30, 2021
Homeಸುದ್ದಿ ಜಾಲಸಂಸತ್ತಿಗೆ ಸೈಕಲ್‌ನಲ್ಲಿ ತೆರಳಿದ ಡಿಕೆ ಸುರೇಶ್

ಇದೀಗ ಬಂದ ಸುದ್ದಿ

ಸಂಸತ್ತಿಗೆ ಸೈಕಲ್‌ನಲ್ಲಿ ತೆರಳಿದ ಡಿಕೆ ಸುರೇಶ್

ನವದೆಹಲಿ, ಜುಲೈ 20: ಭಾರತದಲ್ಲಿ ಪ್ರತಿನಿತ್ಯ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಾಗುತ್ತಿರುವುದನ್ನು ಖಂಡಿಸಿ ಕರ್ನಾಟಕದ ಕಾಂಗ್ರೆಸ್ ಸಂಸದ ಡಿ ಕೆ ಸುರೇಶ್ ವಿನೂತನವಾಗಿ ಪ್ರತಿಭಟನೆ ನಡೆಸಿದ್ದಾರೆ.

ಮಳೆಗಾಲ ಅಧಿವೇಶನದ ಎರಡನೇ ದಿನವಾದ ಮಂಗಳವಾರ ಕಾಂಗ್ರೆಸ್ ಸಂಸದ ಡಿ ಕೆ ಸುರೇಶ್ ಸೈಕಲ್‌ನಲ್ಲಿ ಸಂಸತ್ತಿಗೆ ಆಗಮಿಸುವ ಮೂಲಕ ಪ್ರತಿಭಟನೆ ತೋರಿದ್ದಾರೆ. ತಮ್ಮ ಬೆಂಬಲಿಗರ ಜೊತೆಗೆ ಸಂಸದರು ಸಂಸತ್ತಿನತ್ತ ಸೈಕಲ್ ಏರಿ ಹೊರಟಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

ಮುಂಗಾರು ಅಧಿವೇಶನ ಆರಂಭವಾದ ಮೊದಲ ದಿನವೇ ತೃಣಮೂಲ ಕಾಂಗ್ರೆಸ್ ಪಕ್ಷದ ಸಂಸದರು ಸಂಸತ್ತಿಗೆ ಸೈಕಲ್ ತೆಗೆದುಕೊಂಡು ಹೋಗಿದ್ದರು. ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಗೆ ಕಡಿವಾಣ ಹಾಕುವಂತೆ ಆ ಮೂಲಕ ಸರ್ಕಾರವನ್ನು ಎಚ್ಚರಿಸುವ ಕೆಲಸವನ್ನು ಮಾಡಿದ್ದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img