Friday, July 23, 2021
Homeಜಿಲ್ಲೆಬೆಂಗಳೂರುರಾಜ್ಯದಲ್ಲಿ ಜುಲೈ 23ರವರೆಗೆ ಮಳೆ ಸಾಧ್ಯತೆ

ಇದೀಗ ಬಂದ ಸುದ್ದಿ

ರಾಜ್ಯದಲ್ಲಿ ಜುಲೈ 23ರವರೆಗೆ ಮಳೆ ಸಾಧ್ಯತೆ

ಬೆಂಗಳೂರು, ಜು.20: ರಾಜ್ಯದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಎಲ್ಲ ಸ್ಥಳಗಳಲ್ಲಿ ಜು.23ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಜು.21, 22 ಹಾಗೂ 23ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲೂ ಭಾರೀ ಮಳೆ ನಿರೀಕ್ಷಿಸಲಾಗಿದೆ.

ಜು.21 ಹಾಗೂ 22ರಂದು ಯೆಲ್ಲೋ ಅಲರ್ಟ್, ಜು.23ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬೀದರ್, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಜು.22 ಮತ್ತು 23ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img