Friday, July 23, 2021
Homeಸುದ್ದಿ ಜಾಲದ್ವಿತೀಯ ಪಿಯುಸಿ ಫಲಿತಾಂಶ : 2,239 ವಿದ್ಯಾರ್ಥಿಗಳಿಗೆ 600ಕ್ಕೆ 600 ಅಂಕ

ಇದೀಗ ಬಂದ ಸುದ್ದಿ

ದ್ವಿತೀಯ ಪಿಯುಸಿ ಫಲಿತಾಂಶ : 2,239 ವಿದ್ಯಾರ್ಥಿಗಳಿಗೆ 600ಕ್ಕೆ 600 ಅಂಕ

ಬೆಂಗಳೂರು: 2020-21ನೇ ಸಾಲಿನ ರಾಜ್ಯದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ. ಮಲ್ಲೇಶ್ವರಂನ ಪದವಿ ಪೂರ್ವ ಶಿಕ್ಷಣ ಇಲಾಖೆ ಕಚೇರಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್​ ಕುಮಾರ್ ಫಲಿತಾಂಶ ಪ್ರಕಟಿಸಿದರು.

ಪಿಯುಸಿ ಹಾಗೂ ಎಸ್ಎಸ್ಎಲ್​ಸಿ ಪರೀಕ್ಷೆ ಫಲಿತಾಂಶಗಳ ಆಧಾರದ ಮೇಲೆ ಈ ಫಲಿತಾಂಶ ನೀಡಿದ್ದೇವೆ. ಅನೇಕ ವಿದ್ಯಾರ್ಥಿಗಳು ಪರೀಕ್ಷೆ ಮಾಡುವಂತೆ ಮನವಿ ಮಾಡಿರುವ ಹಿನ್ನೆಲೆಯಲ್ಲಿ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಪರೀಕ್ಷೆ ನಡೆಸಲಾಗಿತ್ತು. ಇದೇ ವೇಳೆ ಫಲಿತಾಂಶದಿಂದ ಅಸಮಾಧಾನವಾಗಿದ್ದರೆ, ಆಗಸ್ಟ್​ನಲ್ಲಿ ನಡೆಯುವ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.

ಒಟ್ಟು 6,66,497 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಇವರ ಪೈಕಿ 3,35,138 ವಿದ್ಯಾರ್ಥಿಗಳು, 3,31,359 ವಿದ್ಯಾರ್ಥಿನಿಯರು ಇದ್ದಾರೆ. ಪ್ರಮುಖವಾಗಿ 1,95,650 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್​ನಲ್ಲಿ ತೇರ್ಗಡೆಯಾಗಿದ್ದಾರೆ. ಗ್ರಾಮೀಣ ಭಾಗದಿಂದ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಸಂಖ್ಯೆ 1,47,243 ಇದರಲ್ಲಿ 14,243 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್​ನಲ್ಲಿ ಪಾಸ್​

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img