Friday, July 23, 2021
Homeಜಿಲ್ಲೆ24 ಗಂಟೆಯಲ್ಲಿ 3,998 ಮಂದಿ ಕೊರೊನಾಗೆ ಬಲಿ!

ಇದೀಗ ಬಂದ ಸುದ್ದಿ

24 ಗಂಟೆಯಲ್ಲಿ 3,998 ಮಂದಿ ಕೊರೊನಾಗೆ ಬಲಿ!

ನವದೆಹಲಿ: ದೇಶದಲ್ಲಿ ಮತ್ತೆ ಕೊರೊನಾ ಭೀತಿ ಹೆಚ್ಚಾಗಿದ್ದು, ಕಳೆದ 24 ಗಂಟೆಗಳಲ್ಲಿ ಹೊಸದಾಗಿ 42,015 ಕೇಸ್​ಗಳು ಪತ್ತೆಯಾಗಿವೆ. ನಿನ್ನೆ ಒಂದೇ ದಿನ 3,998 ಮಂದಿ ಸೋಂಕಿಗೆ ಬಲಿಯಾಗಿದ್ದು, ಈ ಮೂಲಕ ಮೃತಪಟ್ಟವರ ಸಂಖ್ಯೆ 4,18,480 ಕ್ಕೆ ಏರಿದೆ.

ಇಲ್ಲಿವರೆಗೆ 3,12,16,337 ಕೊರೊನಾ ಪ್ರಕರಣಗಳು ದೇಶದಲ್ಲಿ ದಾಖಲಾಗಿದ್ದು, ಸದ್ಯ 4,07,170 ಕೊರೊನಾ ಸಕ್ರಿಯ ಪ್ರಕರಣಗಳಿವೆ. ಇನ್ನು ಕಳೆದ 24 ಗಂಟೆಯಲ್ಲಿ 36,977 ಮಂದಿ ಗುಣಮುಖರಾಗಿದ್ದು, ಇಲ್ಲಿವರೆಗೆ 3,03,90,687 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ.

ಈವರೆಗೆ 41,54,72,455 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ICMR)​ ತಿಳಿಸಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img