Thursday, July 29, 2021
Homeಜಿಲ್ಲೆಬೆಂಗಳೂರುಜುಲೈ 24ರವರೆಗೂ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ

ಇದೀಗ ಬಂದ ಸುದ್ದಿ

ಜುಲೈ 24ರವರೆಗೂ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು : ರಾಜ್ಯದಲ್ಲಿ ಈ ವಾರದ ಪೂರ್ತಿಯಾಗಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರೊಂದಿಗೆ ಬಂಗಾಳಕೊಲ್ಲಿಯಲ್ಲಿ ಒತ್ತಡ ಸೃಷ್ಟಿ ಕಾರಣವಾಗಿ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಬಹುದು ಎಂದು ಹೇಳಿದೆ.

ಜುಲೈ 23ರಂದು ವಾಯವ್ಯ ಬಂಗಾಳಕೊಲ್ಲಿಯಲ್ಲಿ ಒತ್ತಡ ರೂಪುಗೊಳ್ಳುವುದರಿಂದ ರಾಜ್ಯದ ಕರಾವಳಿ ಪ್ರದೇಶಗಳಲ್ಲಿ ಜುಲೈ 20-24ರವರೆಗೂ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಬೆಂಗಳೂರಿನ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.

ಜುಲೈ 24ರವರೆಗೂ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಿಗೆ ಮಳೆ ಎಚ್ಚರಿಕೆ ನೀಡಲಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸೂಚನೆ ನೀಡಿದ್ದು, ಜುಲೈ 22ರವರೆಗೂ ಯೆಲ್ಲೂ ಅಲರ್ಟ್ ಘೋಷಣೆ ಮಾಡಲಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img