Friday, July 30, 2021
Homeಸುದ್ದಿ ಜಾಲಆಗಸ್ಟ್ 15 ರವರೆಗೆ ಕೆಂಪುಕೋಟೆಗೆ ಪ್ರವೇಶ ನಿಷೇಧ

ಇದೀಗ ಬಂದ ಸುದ್ದಿ

ಆಗಸ್ಟ್ 15 ರವರೆಗೆ ಕೆಂಪುಕೋಟೆಗೆ ಪ್ರವೇಶ ನಿಷೇಧ

ನವದೆಹಲಿ: ಇಂದಿನಿಂದ ಮುಂದಿನ ಆಗಸ್ಟ್ 15ರವರೆಗೂ ಐತಿಹಾಸಿಕ ಕೆಂಪುಕೋಟೆಯನ್ನು ಮುಚ್ಚಲಾಗುತ್ತಿದ್ದು, ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧಿಸಲಾಗುವುದು ಎಂದು ಭಾರತೀಯ ಪುರಾತತ್ವ ಸಮೀಕ್ಷೆ ತಿಳಿಸಿದೆ.

ಜುಲೈ 21ರ ಬೆಳಗ್ಗೆಯಿಂದ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ ಮುಕ್ತಾಯವಾಗುವ ತನಕ ಕೆಂಪುಕೋಟೆಯಲ್ಲಿ ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ ಎಂದು ಸೂಚಿಸಲಾಗಿದೆ.

ಕೊರೊನಾವೈರಸ್ ಹರಡುವಿಕೆ ಆತಂಕ ಮತ್ತು ಭದ್ರತೆ ದೃಷ್ಟಿಯಿಂದ ಜುಲೈ 15ರಿಂದ ಆಗಸ್ಟ್ 15ರವರೆಗೂ ಕೆಂಪುಕೋಟೆಯನ್ನು ಮುಚ್ಚುವಂತೆ ದೆಹಲಿ ಪೊಲೀಸರು ಪತ್ರ ಬರೆದಿದ್ದ ಹಿನ್ನೆಲೆ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ.

ಸ್ವಾತಂತ್ರ್ಯ ದಿನಾಚರಣೆ ದಿನ ಸನ್ನಿಹಿತವಾಗುತ್ತಿದ್ದಂತೆ ರಾಷ್ಟ್ರ ರಾಜಧಾನಿಯಲ್ಲಿ ಪೊಲೀಸ್ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img