Friday, July 30, 2021
Homeಸುದ್ದಿ ಜಾಲಆಡಿಯೋ ಬಾಂಬ್​ನಿಂದ ಅಲರ್ಟ್ ಆದ ಶೆಟ್ಟರ್

ಇದೀಗ ಬಂದ ಸುದ್ದಿ

ಆಡಿಯೋ ಬಾಂಬ್​ನಿಂದ ಅಲರ್ಟ್ ಆದ ಶೆಟ್ಟರ್

ಹುಬ್ಬಳ್ಳಿ: ರಾಜ್ಯ ರಾಜಕೀಯದಲ್ಲಿ ಸಿಎಂ ಗದ್ದುಗೆಗೆ ಗುದ್ದಾಟ ಪ್ರಾರಂಭವಾಗಿದೆ. ಈ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್​ ಕಟೀಲ್​ ಮತನಾಡಿದ್ದಾರೆ ಎನ್ನಲಾದ ಆಡಿಯೋ ಬಿಡುಗಡೆ ಆಗುತ್ತಿದ್ದಂತೆ ಕೆಲ ನಾಯಕರು ಫುಲ್​ ಅಲರ್ಟ್ ಆಗಿದ್ದಾರೆ.

ನಳಿನ್ ಕುಮಾರ್ ಕಟೀಲ್ ಮಾತನಾಡಿದ್ದಾರೆ ಎನ್ನಲಾದ ಆಡಿಯೋದಲ್ಲಿ ಇಬ್ಬರು ನಾಯಕರನ್ನು ಕೈಬಿಡುವ ಹೇಳಿಕೆ ಪ್ರಸ್ತಾಪಿಸಿದ್ದು, ಈ ಹಿನ್ನೆಲೆ ಜಗದೀಶ್ ಶೆಟ್ಟರ್ ಫುಲ್ ಅಲರ್ಟ್ ಆಗಿದ್ದಾರೆ. ತಮ್ಮ ಸ್ಥಾನ ಉಳಿಸಿಕೊಳ್ಳುವುದರ ಜೊತೆಗೆ ಸಿಎಂ ಗಾದಿ ಮೇಲು ಕಣ್ಣಿಟ್ಟಿದ್ದಾರೆ ಎನ್ನಲಾಗಿದೆ.

ಜಗದೀಶ್ ಶೆಟ್ಟರ್, ಈಶ್ವರಪ್ಪ ಟೀಂ ಕೈಬಿಡುವ ಮಾತಿದೆ ಎಂದು ಆಡಿಯೋದಲ್ಲಿ ಹೇಳಲಾದ ಹಿನ್ನೆಲೆ‌ ಧಾರವಾಡ ಉಸ್ತುವಾರಿ ಸಚಿವರ ಟೂರ್ ಪ್ಲಾನ್ ಚೇಂಜ್ ಆಗಿದೆ. ಕಳೆದ ಶುಕ್ರವಾರ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಅಧಿಕಾರಿಗಳ ಜೊತೆ ಶೆಟ್ಟರ್ ಗುಜರಾತ್ ಪ್ರವಾಸ ಕೈಗೊಂಡಿದ್ದರು. ಗುಜರಾತ್ ಮುಖ್ಯಮಂತ್ರಿ ವಿಜಯ್​ ರೂಪಾನಿ ಭೇಟಿ ಮಾಡಿ, ಕೈಗಾರಿಕೆ ಬಗ್ಗೆ ಚರ್ಚೆ ಮಾಡಿದ್ದರು. ಅಲ್ಲಿಂದ ಬೆಂಗಳೂರಿಗೆ ಬರುವ ಮುನ್ನವೇ ಬಜೆಪಿ ರಾಜ್ಯಾಧ್ಯಕ್ಷರ ಧ್ವನಿ ಎನ್ನಲಾದ ಆಡಿಯೋ ರಿಲೀಸ್ ಆಯಿತು. ಆಡಿಯೋ ಲೀಕ್​ ಆಗುತ್ತಿದ್ದಂತೆ ಜಗದೀಶ್ ಶೆಟ್ಟರ್ ಬೆಂಗಳೂರಿಗೆ ಬರುವ ಪ್ಲಾನ್ ರದ್ದು ಮಾಡಿ, ದೆಹಲಿಯತ್ತ ಪ್ರಯಾಣ ಮಾಡಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img