Sunday, August 1, 2021
Homeಸುದ್ದಿ ಜಾಲಎಲ್ಲರೂ ಬಾಯಿ ಮುಚ್ಚಿಕೊಂಡಿದ್ರೆ ಗೊಂದಲ ಸರಿಹೋಗುತ್ತದೆ: ಸಚಿವ ಈಶ್ವರಪ್ಪ

ಇದೀಗ ಬಂದ ಸುದ್ದಿ

ಎಲ್ಲರೂ ಬಾಯಿ ಮುಚ್ಚಿಕೊಂಡಿದ್ರೆ ಗೊಂದಲ ಸರಿಹೋಗುತ್ತದೆ: ಸಚಿವ ಈಶ್ವರಪ್ಪ

ಶಿವಮೊಗ್ಗ: ಸಿಎಂ ಬದಲಾವಣೆ ಹಾಗೂ ರಾಜಕೀಯ ಗೊಂದಲಗಳ ಬಗ್ಗೆ ಯಾರು ಮಾತನಾಡದೆ ಹೋದರೆ ಸ್ವಲ್ಪ ದಿನಗಳಲ್ಲಿ ಎಲ್ಲವೂ ಸರಿ ಹೋಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಸ್ವ ಪಕ್ಷದವರಿಗೆ ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಏನು ಮಾಡಬೇಕೆಂದು ರಾಷ್ಟ್ರೀಯ ನಾಯಕರುಗಳು ಒಂದು ತೀರ್ಮಾನ ತೆಗೆದುಕೊಂಡಿದ್ದರು‌. ಪಕ್ಷದ ರಾಷ್ಟ್ರೀಯ ನಾಯಕ ಅರುಣ್ ಸಿಂಗ್ ಬಂದು ಎಲ್ಲರ ಅಭಿಪ್ರಾಯ ಪಡೆದು ರಾಷ್ಟ್ರೀಯ ನಾಯಕರ ಗಮನಕ್ಕೆ ತಂದರೂ ಸಹ ತಲಾ ಒಬ್ಬೂಬ್ಬರು ಮಾತನಾಡುವುದು ಸರಿಯಲ್ಲ. ಇದು ಸರ್ಕಾರಕ್ಕೂ ಮತ್ತು ಪಕ್ಷಕ್ಕೂ ಒಳ್ಳೆಯದಲ್ಲ. ಹೈಕಮಾಂಡ್​ ತೀರ್ಮಾನಕ್ಕೆ ನಾವು ಬದ್ಧ ಎಂದರು.

ನಿನ್ನೆ ಅನೇಕ ಸ್ವಾಮಿಜೀಗಳು ಸಿಎಂ ಯಡಿಯೂರಪ್ಪರನ್ನು ಭೇಟಿ ಮಾಡಿದ್ದರು. ಈ ವೇಳೆ ಕೇಂದ್ರೀಯ ನಾಯಕರು ತೆಗೆದುಕೊಂಡ ತೀರ್ಮಾನಕ್ಕೆ ಬದ್ಧ ಅಂತಾ ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಇದರಿಂದ ಯತ್ನಾಳ್ ಸೇರಿದಂತೆ ಯಾರು ಮಾತನಾಡದೆ ಬಾಯಿ ಮುಚ್ಚಿಸಿಕೊಂಡು ಇದ್ದರೆ ಎಲ್ಲವೂ ಸರಿಯಾಗುತ್ತದೆ. ಇದು ರಾಜ್ಯದ ಹಿತಕ್ಕೆ ಅನುಕೂಲವಾಗುತ್ತದೆ ಎಂದು ಸಚಿವ ಈಶ್ವರಪ್ಪ ಹೇಳಿದ್ರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img