Friday, July 30, 2021
Homeಸುದ್ದಿ ಜಾಲದ್ವಿತೀಯ ಪಿಯುಸಿ ಫಲಿತಾಂಶ ಯಾರಿಗೆ ತೃಪ್ತಿ ತಂದಿಲ್ಲ, ಜು.30ರೊಳಗೆ ಅರ್ಜಿ ಸಲ್ಲಿಸಿ

ಇದೀಗ ಬಂದ ಸುದ್ದಿ

ದ್ವಿತೀಯ ಪಿಯುಸಿ ಫಲಿತಾಂಶ ಯಾರಿಗೆ ತೃಪ್ತಿ ತಂದಿಲ್ಲ, ಜು.30ರೊಳಗೆ ಅರ್ಜಿ ಸಲ್ಲಿಸಿ

ಬೆಂಗಳೂರು, ಜುಲೈ 21: ದ್ವಿತೀಯ ಪಿಯುಸಿ ಫಲಿತಾಂಶದ ಕುರಿತು ತೃಪ್ತಿ ಇಲ್ಲದವರು ಜುಲೈ 30ರೊಳಗೆ ಅರ್ಜಿ ಸಲ್ಲಿಸಿ ಎಂದು ಸಚಿವ ಸುರೇಶ್ ಕುಮಾರ್ ವಿದ್ಯಾರ್ಥಿಗಳಿಗೆ ತಿಳಿಸಿದ್ದಾರೆ.

ಎಸ್‌ಎಸ್‌ಎಲ್‌ಸಿ ಮತ್ತು ಪ್ರಥಮ ಪಿಯುಸಿ ಫಲಿತಾಂಶ ಆಧರಿಸಿ ಪ್ರಕಟಿಸಿರುವ ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶ ತೃಪ್ತಿಕರವಾಗಿಲ್ಲದಿದ್ದಲ್ಲಿ ಅಂತರ ವಿದ್ಯಾರ್ಥಿಗಳು ಜು.30ರೊಳಗೆ ಅರ್ಜಿ ಸಲ್ಲಿಸಬೇಕೆಂದು ಹೇಳಿದ್ದಾರೆ.

ಸಲ್ಲಿಕೆಯಾದ ಅರ್ಜಿಗಳನ್ನು ಪ್ರಾಂಶುಪಾಲರು ಸ್ಟೂಟೆಂಟ್ಸ್ ಅಜಿವ್ಮೆಂಟ್ ಟ್ರ್ಯಾಕಿಂಗ್ ಪೋರ್ಟಲ್ ನಲ್ಲಿ ದಾಖಲಿಸಲು ಜು.30 ಕೊನೆಯ ದಿನವಾಗಿದೆ. ಜು.31ರೊಳಗೆ ಅರ್ಜಿಗಳನ್ನು ಕಡ್ಡಾಯವಾಗಿ ತಮ್ಮ ಜಿಲ್ಲಾ ಉಪನಿರ್ದೇಶಕ ಕಚೇರಿಕೆ ಸಲ್ಲಿಸಬೇಕು. ಉಪ ನಿರ್ದೇಶಕರು ಆಗಸ್ಟ್ 2ರೊಳಗೆ ಇಲಾಖೆಯ ಕೇಂದ್ರ ಕಚೇರಿಗೆ ಕಳುಹಿಸಬೇಕು.

ಪಿಯು ಪರೀಕ್ಷಾ ಶುಲ್ಕ ಮರುಪಾವತಿ ಕುರಿತು ಪ್ರತಿಕ್ರಿಯೆ ನೀಡಿದ ಅವರು, 2020-21ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ರದ್ದಾಗಿರುವ ಹಿನ್ನೆಲೆಯಲ್ಲಿ ಪರೀಕ್ಷಾ ಶುಲ್ಕವನ್ನು ವಿದ್ಯಾರ್ಥಿಗಳಿಗೆ ಹಿಂತಿರುಗಿಸುವ ಯಾವುದೇ ಚಿಂತನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img