Friday, July 23, 2021
Homeಸಿನಿಮಾ'ಭಾರತ ರತ್ನ' ನನ್ನಪ್ಪನ ಕಾಲ್ಬೆರಳಿಗೆ ಸಮ: ನಂದಮೂರಿ ಬಾಲಕೃಷ್ಣ

ಇದೀಗ ಬಂದ ಸುದ್ದಿ

‘ಭಾರತ ರತ್ನ’ ನನ್ನಪ್ಪನ ಕಾಲ್ಬೆರಳಿಗೆ ಸಮ: ನಂದಮೂರಿ ಬಾಲಕೃಷ್ಣ

ಹೈದರಾಬಾದ್: ತೆಲುಗು ಹಿರಿಯ ನಟ ಮತ್ತು ರಾಜಕಾರಣಿ ನಂದಮೂರಿ ಬಾಲಕೃಷ್ಣ ವಿವಾದವೊಂದನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

ಆಸ್ಕರ್ ಪ್ರಶಸ್ಕಿ ಪುರಸ್ಕೃತ ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಯಾರೆಂದೇ ಗೊತ್ತಿಲ್ಲ ಎಂದು ಹೇಳಿರುವ ನಂದಮೂರಿ ಬಾಲಕೃಷ್ಣ ಭಾರತ ರತ್ನ ಪ್ರಶಸ್ತಿ ತನ್ನ ತಂದೆ ಎನ್ ಟಿ ರಾಮರಾವ್ ಅವರ ಕಾಲ್ಬೆರಳಿಗೆ ಸಮ ಎಂದು ಹೇಳಿದ್ದಾರೆ.

ತೆಲುಗು ಚಾನೆಲ್ ಗೆ ನೀಡಿದ ಸಂದರ್ಶನವೊಂದರಲ್ಲಿ ಮಾತನಾಡಿದ ನಂದಮೂರಿ ಬಾಲಕೃಷ್ಣ ಎ.ಆರ್. ರೆಹಮಾನ್ ಅವರ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿರುವ ನಂದಮೂರಿ ಬಾಲಕೃಷ್ಣ, ಎ.ಆರ್. ರೆಹಮಾನ್ ಯಾರು ಎಂಬುದೇ ನನಗೆ ಗೊತ್ತಿಲ್ಲ. ಅವರು ಆಸ್ಕರ್ ಪ್ರಶಸ್ತಿ ಪಡೆದಿದ್ದಾರೆಂದು ಕೇಳಿದ್ದೇನೆ. ಆದರೆ, ನನಗಿನ್ನೂ ಅವರು ಯಾರೆಂದೇ ಗೊತ್ತಾಗಿಲ್ಲ. ರೆಹಮಾನ್ ಎಲ್ಲೋ ಹತ್ತು ವರ್ಷಕ್ಕೊಂದು ಹಿಟ್ ಗೀತೆಯನ್ನು ಕೊಡುತ್ತಾರೆ ಅಷ್ಟೇ ಎನ್ನುವ ಮೂಲಕ ಅನೇಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ ನಟ ಬಾಲಕೃಷ್ಣ.

ಇದಿಷ್ಟೇ ಅಲ್ಲದೆ, ಭಾರತದ ಅತ್ಯುನ್ನತ ಪ್ರಶಸ್ತಿಯಾದ ಭಾರತ ರತ್ನ ಪ್ರಶಸ್ತಿಯ ಬಗ್ಗೆಯೂ ಲೇವಡಿ ಮಾಡುವ ಮೂಲಕ ನಂದಮೂರಿ ಬಾಲಕೃಷ್ಣ ವಿವಾದಕ್ಕೀಡಾಗಿದ್ದಾರೆ. ಭಾರತ ರತ್ನ ಪ್ರಶಸ್ತಿ ನನ್ನ ತಂದೆ ಎನ್​ಟಿಆರ್ ಅವರ ಕಾಲಿನ ಬೆರಳಿನ ಉಗುರಿಗೆ ಸಮಾನ. ಯಾವ ಪ್ರಶಸ್ತಿಗಳೂ ನಮ್ಮ ಕುಟುಂಬ ಟಾಲಿವುಡ್ ಚಿತ್ರರಂಗಕ್ಕೆ ನೀಡಿರುವ ಕೊಡುಗೆಯನ್ನು ಮೀರಿಸಲು ಸಾಧ್ಯವಿಲ್ಲ. ನಮಗ್ಯಾರಿಗೂ ಪ್ರಶಸ್ತಿಗಳು ಬಂದಿಲ್ಲವೆಂದರೆ ಆ ಪ್ರಶಸ್ತಿಗಳೇ ಬೇಸರ ಮಾಡಿಕೊಳ್ಳಬೇಕೇ ಹೊರತು ನಾವಲ್ಲ ಎಂದು ಹೇಳಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img