Friday, July 30, 2021
Homeಸುದ್ದಿ ಜಾಲಚೀನಾದಲ್ಲಿ ವರುಣಾರ್ಭಟ: ಮೃತರ ಸಂಖ್ಯೆ 25ಕ್ಕೆ ಏರಿಕೆ

ಇದೀಗ ಬಂದ ಸುದ್ದಿ

ಚೀನಾದಲ್ಲಿ ವರುಣಾರ್ಭಟ: ಮೃತರ ಸಂಖ್ಯೆ 25ಕ್ಕೆ ಏರಿಕೆ

ಬೀಜಿಂಗ್​: ಚೀನಾದ ಹೆನಾನ್​ನಲ್ಲಿ ವರುಣನಾರ್ಭಟ ಜೋರಾಗಿದ್ದು, ಜನ -ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ವಿಪರ್ಯಾಸ ಎಂದರೆ ಇಷ್ಟೊಂದು ಪ್ರಮಾಣದ ಮಳೆಯಾಗಿರುವುದು ಸಾವಿರ ವರ್ಷದಲ್ಲಿ ಇದೇ ಮೊದಲ ಬಾರಿ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ. ಸಾವಿನ ಸಂಖ್ಯೆ ಏರುತ್ತಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

ಕಂಡು ಕೇಳರಿಯದ ಸುರಿದ ಮಳೆಗೆ ನಿನ್ನೆ 12 ಜನರು ಸಾವನ್ನಪ್ಪಿದ್ದಾರೆಂದು ವರದಿಯಾಗಿತ್ತು. ಸುಮಾರು 10,00,00 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿತ್ತು.ಇದೀಗ ಮೃತರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ. ಏಳು ಮಂದಿ ಕಾಣೆಯಾಗಿದ್ದಾರೆಂದು ವರದಿಯಾಗಿದೆ.

ಕ್ಸಿನ್‌ಸಿಯಾಂಗ್ ನಗರವು ಹೆಚ್ಚು ಹಾನಿಗೊಳಗಾದ ಪ್ರದೇಶಗಳಲ್ಲಿ ಒಂದಾಗಿದ್ದು, 2,600ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಪ್ರದೇಶಗಳಿಗೆ ವರ್ಗಾಯಿಸಲಾಗಿದೆ. ಹೆನಾನ್ ಪ್ರಾಂತ್ಯದಲ್ಲಿ 160,000 ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img