Sunday, August 1, 2021
Homeಜಿಲ್ಲೆಬೆಂಗಳೂರುರಾಜೀನಾಮೆ ಸುಳಿವು ನೀಡಿದ್ರಾ ಬಿಎಸ್​​ವೈ..?

ಇದೀಗ ಬಂದ ಸುದ್ದಿ

ರಾಜೀನಾಮೆ ಸುಳಿವು ನೀಡಿದ್ರಾ ಬಿಎಸ್​​ವೈ..?

ಬೆಂಗಳೂರು: ಮೊದಲ ಬಾರಿಗೆ ರಾಜೀನಾಮೆ ವಿಚಾರವಾಗಿ ಮಾತನಾಡಿರುವ ಸಿಎಂ ಯಡಿಯೂರಪ್ಪ ಜುಲೈ 26ರ ಕಾರ್ಯಕ್ರಮದ ಬಳಿಕ ಹೈಕಮಾಂಡ್ ಸೂಚನೆಯಂತೆ ಮುಂದಿನ ನಿರ್ಧಾರ ಕೈಗೊಳ್ಳಲಿದ್ದೇನೆ. ಪಕ್ಷವನ್ನ ಅಧಿಕಾರಕ್ಕೆ ತರುವ ಸಂಕಲ್ಪ ಮಾಡಿದ್ದೇನೆ. ವರಿಷ್ಠರ ಸೂಚನೆಯಂತೆ 26ರಿಂದ ಕೆಲಸ ಆರಂಭಿಸಲಿದ್ದೇನೆ ಎಂದಿದ್ದಾರೆ.

ಧನ್ವಂತರಿ ಯಾಗದಲ್ಲಿ ಭಾಗಿಯಾದ‌ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿ ಯಾರಿಗೂ 75 ವರ್ಷ ದಾಟಿದವರಿಗೆ ಯಾವುದೇ ಸ್ಥಾನಮಾನ ಕೊಟ್ಟಿಲ್ಲ ಆದರೆ ನನ್ನ ಕೆಲಸವನ್ನು ಮೆಚ್ಚಿ ಪ್ರಧಾನಿ ಮೋದಿ, ಅಮಿತ್ ಶಾ, ನಡ್ಡಾ ಎಲ್ಲರೂ ನನಗೆ 79 ವರ್ಷದವರೆಗೂ ಅವಕಾಶ ಕೊಟ್ಟಿದ್ದಾರೆ.ನಾಳೆಗೆ ನಾನು ಮುಖ್ಯಮಂತ್ರಿಯಾಗಿ ಎರಡು ವರ್ಷ ಆಗಲಿದೆ. ನನ್ನ ಉದ್ದೇಶ ಬರುವ ದಿನಗಳಲ್ಲಿ ಪಕ್ಷವನ್ನು ಬಲಪಡಿಸಿ ಮತ್ತೊಮ್ಮೆ ಅಧಿಕಾರಕ್ಕೆ ತರುವ ಸಂಕಲ್ಪವಾಗಿದೆ. ಅದೇ ಸಂಕಲ್ಪವನ್ನು ಈಗಲೂ ಮಾಡಿದ್ದೇನೆ ಎಂದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img