Sunday, August 1, 2021
Homeಸುದ್ದಿ ಜಾಲSSLC ವಿದ್ಯಾರ್ಥಿಗಳೇ ಗಮನಿಸಿ.!

ಇದೀಗ ಬಂದ ಸುದ್ದಿ

SSLC ವಿದ್ಯಾರ್ಥಿಗಳೇ ಗಮನಿಸಿ.!

ಬೆಂಗಳೂರು : ಕೊರೋನಾ ಸೋಂಕಿನ ಭೀತಿಯ ನಡುವೆಯೂ ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳ ಭವಿಷ್ಯದ ದೃಷ್ಠಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಜುಲೈ.19 ಮತ್ತು ಜುಲೈ.22ರ ಇಂದು ನಡೆಸಲಾಗಿದೆ. ಜುಲೈ.19ರಂದು ನಡೆದಂತ ಮೊದಲ ದಿನದ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯ ಪತ್ರಿಕೆ-1ರ ವಿವಿಧ ವಿಷಯಗಳ ಕೀ ಉತ್ತರವನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದೆ.

ಈ ಕುರಿತಂತೆ ಮಾಹಿತಿ ನೀಡಿರುವಂತ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು.. ಜುಲೈ.19ರಂದು ನಡೆದಂತ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯ ಮೊದಲ ಪತ್ರಿಕೆಯ ವಿಷಯಗಳಾದಂತ ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ವಿಷಯಗಳಿಗೆ ಸಂಬಂಧಿಸಿದಂತೆ ಮಾದರಿ ಉತ್ತರವನ್ನು https://sslc.karnataka.gov.in/ ಜಾಲತಾಣದಲ್ಲಿ ಪ್ರಕಟಿಸಲಾಗಿದೆ ಎಂಬುದಾಗಿ ತಿಳಿಸಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img