Thursday, July 29, 2021
Homeಬೆಂಗಳೂರುಕೇಂದ್ರದ ವಿರುದ್ಧ ಕನ್ನಡ ಪರ ಹೋರಾಟಗಾರರ ಗುಡುಗು!

ಇದೀಗ ಬಂದ ಸುದ್ದಿ

ಕೇಂದ್ರದ ವಿರುದ್ಧ ಕನ್ನಡ ಪರ ಹೋರಾಟಗಾರರ ಗುಡುಗು!

ಬೆಂಗಳೂರು: ಬಿಜೆಪಿ ಹೈಕಮಾಂಡ್ ಕರ್ನಾಟಕ ಜನರ ನಿರೀಕ್ಷೆಗೆ ತಕ್ಕಷ್ಟು ಪ್ರತಿಫಲ ನೀಡಿಲ್ಲ. ಆದರೂ ನಮ್ಮ ನಾಡಿನಲ್ಲಿ ಯಡಿಯೂರಪ್ಪ ಅವರು, ಗಂಡೆದೆಯಿಂದ ಪಕ್ಷ ಕಟ್ಟಿ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಬಿಜೆಪಿ ಬಾವುಟ ಹಾರಿಸಿದ್ದಾರೆ. ಇಂಥ ಮಹಾನ್​ ನಾಯಕರನ್ನು ಅಧಿಕಾರದಿಂದ ಕಿತ್ತೊಗೆಯುವ ಕೆಲಸಕ್ಕೆ ಕೈ ಹಾಕುವ ಮೂಲಕ ನಿಮ್ಮ ಸಿದ್ಧಾಂತವನ್ನು ಇಡೀ ಕನ್ನಡಿಗರಿಗೆ ತೋರಿಸಿ ಕೊಡುತ್ತಿದ್ದೀರಾ? ಈ ಬಗ್ಗೆ ನಾವು ಕನ್ನಡಿಗರೆಲ್ಲರೂ ಒಮ್ಮತದ ನಿರ್ಧಾರಕ್ಕೆ ಬರಬೇಕಾಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಶೆಟ್ಟಿ ಬಿಜೆಪಿ ಹೈಕಮಾಂಡ್​ಗೆ ಎಚ್ಚರಿಕೆ ನೀಡಿದ್ದಾರೆ.

ಸಿಎಂ ಬದಲಾವಣೆ ವಿಚಾರವಾಗಿ ಸಾಕಷ್ಟು ಬೆಳವಣಿಗೆಗಳು ಕಂಡು ಬರುತ್ತಿರುವ ಹಿನ್ನೆಲೆ ಮಾತನಾಡಿದ ಪ್ರವೀಣ್ ಶೆಟ್ಟಿ, ಕರ್ನಾಟಕ ರಕ್ಷಣಾ ವೇದಿಕೆ ಈವರೆಗೂ ಯಾವುದೇ ರಾಜಕೀಯ ಪಕ್ಷಕ್ಕೆ ಬೆಂಬಲ ಕೊಟ್ಟಿಲ್ಲ. ನಾವು ಅನೇಕ ಸಂದರ್ಭಗಳಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಜೊತೆಗೆ ಹೋರಾಟದಲ್ಲಿ ಭಾಗಿಯಾಗಿದ್ದೇವೆ. ವಿಪಕ್ಷ ನಾಯಕರಾಗಿರುವ ಸಿದ್ದರಾಮಯ್ಯರನ್ನು ಹಲವಾರು ಬಾರಿ ಭೇಟಿ ಮಾಡಿದ್ದೇವೆ. ಎಲ್ಲಾ ನಾಯಕರೊಂದಿಗೆ ಉತ್ತಮ ಸಂಬಂಧ ಹೊಂದಿದ್ದೇವೆ ಎಂದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img