Thursday, September 23, 2021
Homeರಾಜಕೀಯದೆಹಲಿಗೆ ತಲುಪಿದ ಮಂಡ್ಯ ಅಕ್ರಮ ಗಣಿಗಾರಿಕೆ ಸದ್ದು..

ಇದೀಗ ಬಂದ ಸುದ್ದಿ

ದೆಹಲಿಗೆ ತಲುಪಿದ ಮಂಡ್ಯ ಅಕ್ರಮ ಗಣಿಗಾರಿಕೆ ಸದ್ದು..

ಮಂಡ್ಯ: ಜಿಲ್ಲೆಯ ಅಕ್ರಮ ಗಣಿಗಾರಿಕೆ ವಿಚಾರ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ಅಂಬರೀಶ್ ನಡುವೆ ಕೆಲವು ದಿನಗಳ ಹಿಂದೆಯಷ್ಟೇ ದೊಡ್ಡ ಸಂಘರ್ಷಕ್ಕೆ ಕಾರಣವಾಗಿತ್ತು.

ಇದರ ಬೆನ್ನಲ್ಲೇ ಸಂಸದೆ ಸುಮಲತಾ ಅಂಬಿ ಕೆಆರ್​ಎಸ್ ಅಣೆಕಟ್ಟು ಹಾಗೂ ಅಕ್ರಮ ಗಣಿಗಾರಿಕೆ ಜಾಗಕ್ಕೆ ಭೇಟಿ ನೀಡಿದ್ದರು. ಅಲ್ಲದೇ ಅಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಬಗ್ಗೆ ಸುಮಲತಾ ಧ್ವನಿ ಎತ್ತಿದ್ದರು.

ಇದೀಗ ಮಂಡ್ಯ ಅಕ್ರಮ ಗಣಿಗಾರಿಕೆ ವಿಚಾರ ದೆಹಲಿಯಲ್ಲಿ ಸದ್ದು ಮಾಡುತ್ತಿದೆ. ಈ ವಿಚಾರವಾಗಿ ದೆಹಲಿಯಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಸಂಸದೆ ಸುಮಲತಾ ಅಂಬರೀಶ್ ಭೇಟಿ ಮಾಡಿ, ಮಂಡ್ಯದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯ ಬಗ್ಗೆ ಮಾಹಿತಿ ನೀಡಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img