Wednesday, September 22, 2021
Homeಬೆಂಗಳೂರುಭಾರೀ ಮಳೆಗೆ ಕುಸಿದು ಬಿತ್ತು ಮನೆ

ಇದೀಗ ಬಂದ ಸುದ್ದಿ

ಭಾರೀ ಮಳೆಗೆ ಕುಸಿದು ಬಿತ್ತು ಮನೆ

ಬೆಂಗಳೂರು: ಕರ್ನಾಟಕದಾದ್ಯಂತ ಧಾರಾಕಾರವಾಗಿ ಸುರಿಯುತ್ತಿರುವ ಮಳೆ (Karnataka Rains) ಕೊಂಚ ತಗ್ಗಿದಂತೆ ಕಂಡರೂ ಕೆಲವೆಡೆ ತನ್ನ ಆರ್ಭಟ ಮುಂದುವರೆಸುವ ಮೂಲಕ ಅನಾಹುತಕ್ಕೆ ಕಾರಣವಾಗುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಸಂಜೆ ಸುರಿದ ಭಾರೀ ಮಳೆ (Bengaluru Rains) ಹಲವು ಪ್ರದೇಶಗಳಲ್ಲಿ ಅವಾಂತರ ಸೃಷ್ಟಿಸಿದ್ದು, ಜನಜೀವನ ಅಸ್ಥವ್ಯಸ್ಥವಾಗಿದೆ. ದೊಮ್ಮಲೂರಿನ ಗೌತಮ್ ಕಾಲೋನಿಯಲ್ಲಿ ಮಳೆಯ ಅಬ್ಬರಕ್ಕೆ ಸಿಲುಕಿ ಮನೆಯೊಂದು ಕುಸಿದಿದ್ದು, ಅವಘಡ ಸಂಭವಿಸುವ ವೇಳೆ ಮನೆಯೊಳಗೆ ಯಾರೂ ಇರಲಿಲ್ಲವಾದ್ದರಿಂದ ದೊಡ್ಡ ದುರಂತವೊಂದು ತಪ್ಪಿಹೋಗಿದೆ.

ದೊಮ್ಮಲೂರಿನ ಗೌತಮ್ ಕಾಲೊನಿಯ ಸ್ಲಂ ಪ್ರದೇಶದಲ್ಲಿ ಘಟನೆ ಸಂಭವಿಸಿದ್ದು, ಅದೃಷ್ಟವಶಾತ್ ಮನೆಯಲ್ಲಿ ಯಾರೂ ಇರಲಿಲ್ಲವಾದ್ದರಿಂದ ಜೀವಹಾನಿ ಸಂಭವಿಸಿಲ್ಲ. ಮನೆಯವರು ಸಂಬಂಧಿಕರ ಮನೆಗೆ ಹೋಗಿದ್ದರಿಂದ ಅನಾಹುತ ತಪ್ಪಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img